ಬಂಟ್ವಾಳ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಬಂಟ್ವಾಳ ಘಟಕದ ಅಧ್ಯಕ್ಷರಾಗಿ ರಮೇಶ್ ಮೆಲ್ಕಾರ್ ಆಯ್ಕೆಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಚುಸಾಪ ಅಧ್ಯಕ್ಷರಾದ ಹರೀಶ್ ಸುಲಾಯ ಒಡ್ಡಂಬೆಟ್ಟು ಮತ್ತು ಗೌರವಾಧ್ಯಕ್ಷರಾದ ಇರಾ ನೇಮು ಪೂಜಾರಿ ಶಿಫಾರಸಿನ ಮೇಲೆ ರಮೇಶ್ ಮೇಲ್ಕಾರ್ ಅವರನ್ನು ರಾಜ್ಯ ಪ್ರಧಾನ ಸಂಚಾಲಕರಾದ ಡಾ.ಎಮ್.ಜಿ.ಆರ್.ಅರಸ್ ಅವರು ಬಂಟ್ವಾಳ ತಾಲೂಕಿನ ಚುಸಾಪ ಘಟಕದ ಅದ್ಯಕ್ಷರನ್ನಾಗಿ ನೇಮಕ ಮಾಡಿರುತ್ತಾರೆ.
VNR GOLD
ಚುಟುಕು ಸಾಹಿತ್ಯದ ಬೆಳವಣಿಗೆ ಹಾಗೂ ಸಾಹಿತ್ಯಾಸಕ್ತರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಚುಟುಕು ಸಾಹಿತ್ಯ ಪರಿಷತ್ ಕಳೆದ ಹಳವಾರು ವರ್ಷಗಳಿಂದ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ಪ್ರತೀ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಘಟಕಗಳನ್ನು ಹೊಂದಿದ್ದು ವಿವಿಧ ಸಾಹಿತ್ಯಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಕ್ರಿಯವಾಗಿದೆ. ಚುಟುಕು ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಯುವ ಹಾಗೂ ಹಿರಿಯ ಸಾಹಿತಿಗಳನ್ನು ಪ್ರೋತ್ಸಾಹಿಸುವುದು, ಚುಟುಕು ಸಾಹಿತ್ಯದ ಕುರಿತು ಅರಿವು ಮೂಡಿಸುವುದು ಮತ್ತು ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವುದು ಮುಖ್ಯ ಉದ್ದೇಶವಾಗಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಂಟ್ವಾಳ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ರಮೇಶ್ ಮೆಲ್ಕಾರ್ ಆಯ್ಕೆ"
Be the first to comment on "ಬಂಟ್ವಾಳ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ರಮೇಶ್ ಮೆಲ್ಕಾರ್ ಆಯ್ಕೆ"