ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ‘ಊರ್ಮಿಳಾ’ ಏಕವ್ಯಕ್ತಿ ನಾಟಕ

ಬಂಟ್ವಾಳ: ಸಾಹಿತ್ಯಕ ಹಾಗೂ ಸಾಂಸ್ಕೃತಿಕ ವೇದಿಕೆ ಅಭಿರುಚಿ ಜೋಡುಮಾರ್ಗ ಆಶ್ರಯದಲ್ಲಿ, ಅಯನಾ ಮೂಡುಬಿದಿರೆ ತಂಡ ಅ.30ರ ಶುಕ್ರವಾರ ಸಂಜೆ 6.30ಕ್ಕೆ ಏಕವ್ಯಕ್ತಿ ನಾಟಕ ಊರ್ಮಿಳಾ ಪ್ರದರ್ಶನವನ್ನು ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ನೀಡಲಿದೆ.

ಹಿರಿಯ ಸಾಹಿತಿ ಡಾ. ಎಚ್. ಎಸ್. ವೆಂಕಟೇಶಮೂರ್ತಿ ರಚಿಸಿ , ರಂಗ ನಿರ್ದೇಶಕ ಡಾ. ಶ್ರೀಪಾದ ಭಟ್ ನಿರ್ದೇಶಿಸಿದ, ಸ್ತ್ರೀ ಸಂವೇದನೆಯ ಈ ನಾಟಕದಲ್ಲಿ ಮೂಡುಬಿದಿರೆಯ ಕಲಾವಿದೆ ವಿದುಷಿ ಅಯನಾ.ವಿ. ರಮಣ್ ಅಭಿನಯಿಸಲಿದ್ದಾರೆ ಎಂದು ‘ಅಭಿರುಚಿ’ಯ ಪ್ರಕಟಣೆ ತಿಳಿಸಿದೆ.

VNR GOLD

ವಿಶೇಷ ಆಹ್ವಾನಿತರಾಗಿ ಪಾಣೆಮಂಗಳೂರಿನ ಶ್ರೀ ವೀರ ವಿಠಲ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾದ  ಲಕ್ಷ್ಮೀ,  ಎನ್. ಪ್ರಮೋದ್ ಭಟ್ ದಂಪತಿ,  ತಾಲೂಕು ಕ.ಸಾ.ಪ. ಅಧ್ಯಕ್ಷ ವಿಶ್ವನಾಥ ಬಂಟ್ವಾಳ್, ಸಂಸ್ಕಾರ ಭಾರತಿಯ ದ.ಕ. ಜಿಲ್ಲಾಧ್ಯಕ್ಷ ತಾರಾನಾಥ ಕೊಟ್ಟಾರಿ, ಶಿಕ್ಷಣ ಸೌರಭ ರಾಷ್ಟ್ರ ಪ್ರಶಸ್ತಿ ವಿಜೇತ ಜಯಾನಂದ ಪೆರಾಜೆ, ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ರವಿಚಂದ್ರ ಬಂಟ್ವಾಳ್, ಪ್ರೌಢಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ಸೀತಾರಾಮ ಭಟ್, ಸಾವಿತ್ರಿ ದಂಪತಿ, ಉದ್ಯಮಿಗಳಾದ ಮೈತ್ರಿ, ಮೋಹನ್ ಪೈ  ಮಾಣಿ , ಮತ್ತು  ಪುಷ್ಪಲತಾ, ಎಂ.ಎನ್. ಕುಮಾರ್ ಮೆಲ್ಕಾರ್  ಭಾಗವಹಿಸಲಿದ್ದಾರೆ.  

ಜಾಹೀರಾತು

ವಿಶಿಷ್ಟ ರಂಗಪ್ರಯೋಗವನ್ನು ವೀಕ್ಷಿಸಿ, ಇದರ ಕುರಿತಾಗಿ ಒಂದೆರಡು ಪುಟಗಳ ವಿಮರ್ಶೆ ಬರೆಯುವ ಬಗ್ಗೆ ಸ್ಥಳೀಯ ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಸ್ಪರ್ಧೆ ಏರ್ಪಡಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ನಾಟಕ ನಡೆಯುವ ದಿನ ‘ಅಭಿರುಚಿ ‘ಯ ಪದಾಧಿಕಾರಿಗಳನ್ನು ಸಂಪರ್ಕಿಸಬಹುದು, ಇಲ್ಲವೇ 9632430012, 8277557765 ನಂಬರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.ಆಸಕ್ತರಿಗೆ ಮುಕ್ತ ಪ್ರವೇಶ ಕಲ್ಪಿಸಲಾಗಿರುವ ಈ 60 ನಿಮಿಷಗಳ ಅವಧಿ ಯ ನಾಟಕ ಪ್ರದರ್ಶನ ಸಮಯಕ್ಕೆ ಸರಿಯಾಗಿ ನಡೆಯಲಿದ್ದು ಬಳಿಕ ಸಂವಾದ ನಡೆಯಲಿದೆ ಎಂದು ಅಭಿರುಚಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ‘ಊರ್ಮಿಳಾ’ ಏಕವ್ಯಕ್ತಿ ನಾಟಕ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*