ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದ ಬುಡೋಕಾನ್ ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ನಲ್ಲಿ ಕುಮಿಟೆ ಮತ್ತು ಕಟ ವಿಭಾಗಗಳಲ್ಲಿ ಎರಡು ಚಿನ್ನದ ಪದಕಗಳನ್ನು ಗೆದ್ದು ತನಿಷ್ಕ ಸಾಧನೆ ಮಾಡಿದ್ದಾರೆ.
ಉಡುಪಿ ಕಲರಹ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಅಕ್ಷತಾ ಹಾಗೂ ಭಾರತೀಯ ರೈಲ್ವೆಯ ಮೈಸೂರು ವಿಭಾಗದ ಮಂಡ್ಯದಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಪವನ್ ಕುಮಾರ್ ದಂಪತಿಯ ಪುತ್ರಿಯಾದ ತನಿಷ್ಕ, ಉಡುಪಿಯ ಅಜ್ಜರಕಾಡಿನ ಸಂತ ಸಿಸಿಲಿ ಪ್ರೌಢಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಕರಾಟೆ ಗುರುಗಳಾದ ಸಂತೋಷ್ ಶೆಟ್ಟಿ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.ಕುರಿಯಾಳದ ಮೋಹಿನಿ ಮತ್ತು ಜಗದೀಶ್ ಭಂಡಾರಿ ಅವರ ಮೊಮ್ಮಗಳಾದ ತನಿಷ್ಕ ಅವರು ತಮ್ಮ ಪ್ರತಿಭೆ, ಪರಿಶ್ರಮ ಮತ್ತು ಸಾಧನೆಯ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ.