ಬಂಟ್ವಾಳ: ಅಟೋ ರಿಕ್ಷಾ ಚಾಲಕ ಮಾಲೀಕರ ಸಂಘ ಬಂಟ್ವಾಳದ 38ನೇ ವಾರ್ಷಿಕ ಮಹಾಸಭೆ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು.
ಸಂಘದ ಗೌರವಾಧ್ಯಕ್ಷ ಗೋವಿಂದ ಪ್ರಭು ಕಾರ್ಯಕ್ರಮ ಉದ್ಘಾಟಿಸಿದರು.ಬಂಟ್ವಾಳ ತಾಲೂಕು ರಿಕ್ಷಾ ಚಾಲಕ ಮಾಲೀಕರ ಸಂಘದ ಅಧ್ಯಕ್ಷ ವಸಂತ ಕುಮಾರ್ ವಿ. ಮಣಿಹಳ್ಳ ಅಧ್ಯಕ್ಷತೆ ವಹಿಸಿದ್ದರು.
ಬಿ.ಎಂ.ಎಸ್. ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು., ಮೋಟಾರು ಎಂಡ್ ಜನರಲ್ ಮಜ್ದೂರ್ ಸಂಘದ ಅಧ್ಯಕ್ಷ ವಿಶ್ವನಾಥ ಶೆಟ್ಟಿ, ಕಾನೂನು ಸಲಹೆಗಾರ ಜಯರಾಮ ರೈ, ಸಂಘದ ಗೌರವಾಧ್ಯಕ್ಷ ಸದಾನಂದ ಹಳೆಗೇಟು, ಬಿ.ಎಂ.ಎಸ್. ಜಿಲ್ಲಾ ಕಾರ್ಯದರ್ಶಿ ಗೋಪಾಲಕೃಷ್ಣ, ಸುಳ್ಯ ತಾಲೂಕು ರಿಕ್ಷಾ ಚಾಲಕ ಮಾಲೀಕರ ಸಂಘದ ಅಧ್ಯಕ್ಷ ಪ್ರಕಾಶ್ ಹಾಗೂ ಪುತ್ತೂರು ತಾಲೂಕು ಸಂಘದ ಅಧ್ಯಕ್ಷ ಹೇಮಂತ್ ಕುಮಾರ್ ಉಪಸ್ಥಿತರಿದ್ದರು. ದಿನೇಶ್ ಮೂಲ್ಯ ಸ್ವಾಗತಿಸಿದರು. ನವೀನ್ ವಂದಿಸಿದರು. ಉಮಾಶಂಕರ್ ಕಾರ್ಯಕ್ರಮ ನಿರೂಪಿಸಿದರು