ಬಂಟ್ವಾಳ

ಬಂಟ್ವಾಳ ವಕೀಲರ ಸಂಘದ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅಗತ್ಯ. ಆರೋಗ್ಯವಿದ್ದರೆ ಮಾತ್ರ ಉತ್ತಮ ಕೆಲಸಗಳನ್ನು ಮಾಡಲು ಹಾಗೂ ಸದೃಢ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಲು ಸಾಧ್ಯ ಎಂದು ಬಂಟ್ವಾಳ ಪ್ರಧಾನ ಸಿವಿಲ್ ನ್ಯಾಯಾಧೀಶ ಹಾಗೂ ಜೆಎಂಎಫ್‌ಸಿ ರಾಜೇಂದ್ರ ಪ್ರಸಾದ್ ಕೆ.ಎಸ್. ಹೇಳಿದರು.

VNR GOLD

ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘ, ಬಂಟ್ವಾಳ ವಕೀಲರ ಸಂಘ ಹಾಗೂ ಯೆನೆಪೋಯ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಬುಧವಾರ ಬಂಟ್ವಾಳ ಕೋರ್ಟ್ ಆವರಣದಲ್ಲಿ ನಡೆದ ಉಚಿತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದರಿಂದ ಮುಂದಿನ ದಿನಗಳಲ್ಲಿ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಇಂತಹ ಶಿಬಿರಗಳು ಜನರಲ್ಲಿ ಆರೋಗ್ಯ ಜಾಗೃತಿ ಮೂಡಿಸುವುದರ ಜತೆಗೆ, ಆರಂಭಿಕ ಹಂತದಲ್ಲಿಯೇ ಆರೋಗ್ಯ ಸಮಸ್ಯೆಗಳನ್ನು ಗುರುತಿಸಲು ಸಹಕಾರಿಯಾಗುತ್ತವೆ. ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಇಂತಹ ಶಿಬಿರಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.

ಜಾಹೀರಾತು

ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಹಾಗೂ ಜೆಎಂಎಫ್‌ಸಿ ಸೌಂದರ್ಯ ಎಂ. ಮಾತನಾಡಿ, ಸದೃಢ ಹಾಗೂ ಆರೋಗ್ಯವಂತ ಸಮಾಜ ನಿರ್ಮಿಸುವ ಉದ್ದೇಶದಿಂದ ಉತ್ತಮ ಕಾರ್ಯವನ್ನು ಸಂಘಟಿಸಲಾಗಿದೆ. ಆರೋಗ್ಯದ ಕುರಿತ ಜಾಗೃತಿ ಪ್ರತಿಯೊಬ್ಬರಲ್ಲೂ ಮೂಡಬೇಕು. ವೈದ್ಯಕೀಯ ತಪಾಸಣೆ ಮತ್ತು ಅಗತ್ಯ ಸಲಹೆಗಳನ್ನು ಪಡೆಯಲು ಇಂತಹ ಶಿಬಿರಗಳು ಉತ್ತಮ ಅವಕಾಶವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ವಕೀಲರ ಸಂಘದ ಅಧ್ಯಕ್ಷ ರಿಚರ್ಡ್ ಕೊಸ್ತಾ ಎಂ. ಅಧ್ಯಕ್ಷತೆ ವಹಿಸಿದ್ದರು. ಶಿಬಿರದಲ್ಲಿ ಸಾಮಾನ್ಯ ವೈದ್ಯಕೀಯ ತಪಾಸಣೆ, ನೇತ್ರ ತಪಾಸಣೆ, ಚರ್ಮರೋಗ ತಪಾಸಣೆ, ರಕ್ತದ ಗುಂಪು ವರ್ಗೀಕರಣ, ರಕ್ತದೊತ್ತಡ ಹಾಗೂ ಮಧುಮೇಹ ತಪಾಸಣೆ ನಡೆಸಲಾಯಿತು. ದಂತ ವೈದ್ಯಕೀಯ ವಿಭಾಗದಲ್ಲಿ ಉಚಿತ ದಂತ ತಪಾಸಣೆ, ವೈದ್ಯರ ಸಲಹೆ, ಹಲ್ಲುಗಳ ಶುಚೀಕರಣ, ಅಗತ್ಯವಿರುವ ಹಲ್ಲುಗಳ ಹೊರತೆಗೆಯುವಿಕೆ, ಮಕ್ಕಳ ದಂತ ತಪಾಸಣೆ ಮತ್ತು ಚಿಕಿತ್ಸೆ, ಸೀಳು ತುಟಿಯ ತಪಾಸಣೆ ಹಾಗೂ ಚಿಕಿತ್ಸೆ ಮತ್ತು ಹಲ್ಲುಗಳಿಗೆ ತುಂಬಿಸುವಿಕೆ ಸೇರಿದಂತೆ ವಿವಿಧ ಸೇವೆಗಳನ್ನು ಒದಗಿಸಲಾಯಿತು. ಹೆಚ್ಚಿನ ಚಿಕಿತ್ಸೆಯ ಅಗತ್ಯವಿರುವವರಿಗೆ ಮುಂದಿನ ಚಿಕಿತ್ಸೆಗೆ ಸೂಕ್ತ ಸಲಹೆ ನೀಡುವ ವ್ಯವಸ್ಥೆ ಮಾಡಲಾಗಿತ್ತು. ಸರಕಾರಿ ಅಭಿಯೋಜಕ ಬಿ.ವಿ. ಶೆಣೈ, ವೈದ್ಯಕೀಯ ಅಧಿಕಾರಿ ಡಾ. ಆಯಿಶಾ, ಟ್ಯೂಟರ್ ಡಾ. ರಿಯಾಜ್, ಹಿರಿಯ ದಂತ ಸಂಯೋಜನಾಧಿಕಾರಿ ಭರತ್ ಕುಮಾರ್ ಹಾಗೂ ವೈದ್ಯಕೀಯ ಸಮಾಜ ಸೇವಕಿ ಸ್ವೀಕೃತ ಉಪಸ್ಥಿತರಿದ್ದರು. ಬಂಟ್ವಾಳ ವಕೀಲರ ಸಂಘದ ಕಾರ್ಯದರ್ಶಿ ಕೆ. ನರೇಂದ್ರನಾಥ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.