
ಬಂಟ್ವಾಳ: ಪುತ್ತೂರಿನ ಶ್ರೀ ದೇವಿ ನೃತ್ಯಾರಾಧನಾ ಕಲಾ ಕೇಂದ್ರ (ರಿ.) ವತಿಯಿಂದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಸಹಕಾರದೊಂದಿಗೆ ‘ನೃತ್ಯ ಧಾರಾ’ ವಿಂಶತಿ ಸಂಭ್ರಮ ಹಾಗೂ ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಕೀರ್ತಿಶೇಷ ರಸಿಕರತ್ನ ನಯನ ಕುಮಾರ್ ಅವರ ಸ್ಮರಣಾರ್ಥ ‘ಕಲಾನಯನ’ ಪ್ರಶಸ್ತಿ ಪ್ರದಾನ ಸಮಾರಂಭ ನ.1ರಂದು ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಆಯೋಜಿಸಲಾಗಿದೆ.

ಸಂಜೆ ಗಂಟೆ 3.30ರಿಂದ ದೀಪ ಪ್ರಜ್ವಲನದೊಂದಿಗೆ ಕಾರ್ಯಕ್ರಮಗಳು ಆರಂಭಗೊಳ್ಳಲಿವೆ. ಸಂಜೆ 6ಕ್ಕೆ ಸಭಾ ಕಲಾಪ ಶುರುವಾಗಲಿದ್ದು, ಅಧ್ಯಕ್ಷತೆಯನ್ನು ರಾಜ್ಯ ಮಾನವ ಹಕ್ಕುಗಳ ಆಯೋಗ ಅಧ್ಯಕ್ಷ ಡಾ. ಟಿ. ಶ್ಯಾಮ ಭಟ್ ವಹಿಸುವರು.

ಮುಖ್ಯ ಅತಿಥಿಗಳಾಗಿ ಹೈಕೋರ್ಟ್ ಹಿರಿಯ ನ್ಯಾಯವಾದಿ ಡಾ. ಎಂ.ಅರುಣಶ್ಯಾಮ್ ಭಾಗವಹಿಸುವರು. ಈ ಸಂದರ್ಭ ಕಲಾನಯನ ಪ್ರಶಸ್ತಿಯನ್ನು ಸುರತ್ಕಲ್ ನಾಟ್ಯಾಂಜಲಿ ಕಲಾ ಅಕಾಡೆಮಿ ನೃತ್ಯಗುರು ಕರ್ನಾಟಕ ಕಲಾಶ್ರೀ ವಿದ್ವಾನ್ ಚಂದ್ರಶೇಖರ ನಾವಡ ಅವರಿಗೆ ನೀಡಿ ಗೌರವಿಸಲಾಗುವುದು. ಇದೇ ವೇಳೆ ದ.ಕ.ಜಿಲ್ಲಾ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ಅಧ್ಯಕ್ಷ ಸುಭಾಶ್ಚಂದ್ರ ಜೈನ್ ಅವರನ್ನು ಸನ್ಮಾನಿಸಲಾಗುವುದು ಎಂದು ಸಂಸ್ಥೆಯ ಸ್ಥಾಪಕರು ಹಾಗೂ ನೃತ್ಯ ನಿರ್ದೇಶಕರಾದ ವಿದುಷಿ ರೋಹಿಣಿ ಉದಯ್ ಹಾಗೂ ಸಂಚಾಲಕರಾದ ಉದಯ ವೆಂಕಟೇಶ್ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





Be the first to comment on "ನ.1ರಂದು ನೃತ್ಯಧಾರಾ ವಿಂಶತಿ ಸಂಭ್ರಮ, ಕಲಾನಯನ ಪ್ರಶಸ್ತಿ ಪ್ರದಾನ"