ಬಂಟ್ವಾಳ: ಬರಿಮಾರು ಗ್ರಾಮದ ಕಾಗೆಕಾನ ಸಂಪರ್ಕ ರಸ್ತೆಯ ಅಭಿವೃದ್ಧಿಗಾಗಿ ರೂ. 30 ಲಕ್ಷ ಅನುದಾನ ಒದಗಿಸಲಾಗಿದ್ದು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಚಾಲನೆ ನೀಡಿದರು.
ಗ್ರಾಮೀಣ ಭಾಗದ ರಸ್ತೆ ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸುವುದು ನಮ್ಮ ಆದ್ಯತೆಯಾಗಿದೆ. ಉತ್ತಮ ರಸ್ತೆ ಸಂಪರ್ಕವು ಜನರ ದೈನಂದಿನ ಸಂಚಾರಕ್ಕೆ ಮಾತ್ರವಲ್ಲದೆ, ವಿದ್ಯಾರ್ಥಿಗಳು, ರೈತರು ಹಾಗೂ ಸಾರ್ವಜನಿಕರ ಅಗತ್ಯಗಳಿಗೂ ಬಹಳ ಮುಖ್ಯವಾಗಿದೆ ಎಂದರು.
ಬಿಜೆಪಿ ಬಂಟ್ವಾಳ ಕ್ಷೇತ್ರ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ದೇವಪ್ಪ ಪೂಜಾರಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಜಿನರಾಜ್ ಕೋಟ್ಯಾನ್, ಜಿಲ್ಲಾ ವಕ್ತಾರರಾದ ಮಾಧವ ಮಾವೆ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಕಮಲಾಕ್ಷಿ ಕೆ. ಪೂಜಾರಿ, ಶಕ್ತಿ ಕೇಂದ್ರದ ಅಧ್ಯಕ್ಷರಾದ ಗಣೇಶ್ ಬುರ್ದು, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ದಿನರಾಜ್ ಹಾಗೂ ಗ್ರಾಮ ಪಂಚಾಯತ್ನ ನಿಕಟಪೂರ್ವ ಅಧ್ಯಕ್ಷರಾದ ಸದಾಶಿವ ಜಿ. ಬರಿಮಾರು ಉಪಸ್ಥಿತರಿದ್ದರು.