ಬಂಟ್ವಾಳ

ಬಂಟ್ವಾಳ ತಾಲೂಕು ಮಟ್ಟದ ರಾಜ್ಯೋತ್ಸವ: ಕನ್ನಡ ಭಾಷೆ ಅಸ್ತಿತ್ವ ಉಳಿಸಲು ಕರೆ

ಬಂಟ್ವಾಳ: ತಾಲೂಕು ಆಡಳಿತ ಸೌಧದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಭಾನುವಾರ ನಡೆದ ಬಂಟ್ವಾಳ ತಾಲೂಕು ಮಟ್ಟದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡಕ್ಕೆ ಇರುವ ಅಪಾಯ ಹಾಗೂ ಭಾಷೆಯನ್ನು ಉಳಿಸಲು ಅತಿಥಿಗಳು ಮತ್ತು ದಿಕ್ಸೂಚಿ ಭಾಷಣ ಮಾಡಿದ ಬಂಟ್ವಾಳ ವಿದ್ಯಾಗಿರಿಯ ಎಸ್.ವಿ.ಎಸ್.ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆಶ್ನಿ ಆರ್. ಶೆಟ್ಟಿ ಕರೆ ನೀಡಿದರು.

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ವಹಿಸಿ ರಾಜ್ಯೋತ್ಸವಕ್ಕೆ ಶುಭ ಕೋರಿದರು.

ಬಂಟ್ವಾಳ ತಹಸೀಲ್ದಾರ್ ಜಿ.ಮಂಜುನಾಥ್ ಮಾತನಾಡಿ, ನಮ್ಮ ಪೂರ್ವಜರು ಕಟ್ಟಿ ಬೆಳೆಸಿದ ಕನ್ನಡ ನಾಡು, ಭಾಷೆಯನ್ನು ಉಳಿಸಿ, ಬೆಳೆಸುವ ಕೆಲಸ ನಮ್ಮದಾಗಬೇಕು. ಕನ್ನಡ ಭಾಷೆಯಷ್ಟೇ ಅಲ್ಲ, ಭಾವನೆ, ನಮ್ಮ ಅಸ್ಮಿತೆ. ಮುಂದಿನ ಪೀಳಿಗೆಗೆ ಶ್ರೀಮಂತ ಪರಂಪರೆಯನ್ನು ಉಳಿಸೋಣ ಎಂದರು.

ಜಾಹೀರಾತು

ಬಂಟ್ವಾಳ ವಿದ್ಯಾಗಿರಿಯ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆಯ ಆಶ್ನಿ ಆರ್. ಶೆಟ್ಟಿ ದಿಕ್ಸೂಚಿ ಭಾಷಣ ಮಾಡಿ, ನಿತ್ಯದ ಬದುಕಿನಲ್ಲಿ ಕನ್ನಡದ ಉಳಿವಿಗೆ ಶ್ರಮಿಸಬೇಕು. ಬೇರೆ ಭಾಷೆ ಎತ್ತರಕ್ಕೇರಿಸುವ ಭರದಲ್ಲಿ ತಾಯಿಭಾಷೆಯನ್ನು ಮರೆಯಬಾರದು ಎಂದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಮಾತನಾಡಿ ನಮ್ಮ ಪ್ರತಿಭೆಗಳನ್ನು ಗುರುತಿಸುವ ಕೆಲಸ ತಾಲೂಕು ಮಟ್ಟದಲ್ಲೂ ಆಗಬೇಕು ಎಂದರು.

ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ.ಪೂಜಾರಿ ಮಾತನಾಡಿ, ಕನ್ನಡ ಉಳಿಸುವ ಜವಾಬ್ದಾರಿ ನವಪೀಳಿಗೆಗೆ ಇದೆ ಎಂದರು.

 ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸಚಿನ್ ಕುಮಾರ್ ಮಾತನಾಡಿ, ಬೆಂಗಳೂರು ಸಹಿತ ರಾಜ್ಯದ ನಗರಗಳಲ್ಲಿ ಅನ್ಯಭಾಷೆಗಳ ಪ್ರಭಾವದಿಂದ ಕನ್ನಡ ಮರೆಯಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿ, ಭಾಷೆಯನ್ನು ಉಳಿಸುವ ಜವಾಬ್ದಾರಿ ನಮಗಿದೆ ಎಂದರು.

ಈ ಸಂದರ್ಭ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವಕ್ಕೆ ಪಾತ್ರಳಾದ ಪ್ರಾಧ್ಯಾ ವೈ. ಕುಲಾಲ್ ಮತ್ತು ನಿವೃತ್ತ ಶಿಕ್ಷಕಿ ಹಾಗೂ ಅಥ್ಲೀಟ್ ಸಾಧಕಿ ಗ್ಲಾಡಿಯನ್ ಪಾಯಸ್ ಅವರನ್ನು ಸನ್ಮಾನಿಸಲಾಯಿತು.

 ಕ್ಷೇತ್ರ ಶಿಕ್ಷಣಾಧಿಕಾರಿ ಮಾಲತಿ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಎಇಇ ತಾರಾನಾಥ ಸಾಲ್ಯಾನ್ ಸಹಿತ ಅಧಿಕಾರಿಗಳು ಹಾಜರಿದ್ದರು. ತಾಲೂಕು ದೈಹಿಕ ಶಿಕ್ಣಣ ಪರಿವೀಕ್ಷಣಾಧಿಕಾರಿ ಆಶಾ ನಾಯಕ್ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಅಧಿಕಾರಿ ರಮಾನಂದ ನೂಜಿಪ್ಪಾಡಿ ವಂದಿಸಿದರು. ಕ್ಲಸ್ಟರ್ ಸಂಪನ್ಮೂಲ ಕೇಂದ್ರದ ಅಧಿಕಾರಿ ಸುರೇಖಾ ಯಳವರ ಕಾರ್ಯಕ್ರಮ ನಿರ್ವಹಿಸಿದರು. ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆ ಬಿ.ಸಿ.ರೋಡ್, ಸ್ವರ್ಣ ಲರ್ನಿಂಗ್ ಅಕಾಡೆಮಿ, ಕೊಡಂಗೆ ಸರಕಾರಿ ಪ್ರೌಢಶಾಲೆ, ಪ್ರಾಥಮಿಕ ಶಾಲೆ, ಮೊಡಂಕಾಪು ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆ, ಕಾಡುಮಠ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೊಡಂಕಾಪು ದೀಪಿಕಾ ಪ್ರೌಢಶಾಲೆ, ಕಾರ್ಮೆಲ್ ಬಾಲಕಿಯರ ಪ್ರೌಢಶಾಲೆ, ಬಿ.ಸಿ.ರೋಡ್ ಅಜ್ಜಿಬೆಟ್ಟು ಸರಕಾರಿ ಪ್ರೌಢಶಾಲೆ, ತೌಹೀದ್ ಆಂಗ್ಲ ಮಾಧ್ಯಮ ಶಾಲೆ, ಬಂಟ್ವಾಳ ಎಸ್.ವಿ.ಎಸ್.ಪ್ರೌಢಶಾಲೆ, ಬಂಟ್ವಾಳ ಎಸ್.ವಿ.ಎಸ್. ದೇವಳ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢಶಾಲೆ, ಎಸ್.ಎಲ್.ಎನ್.ಪಿ. ಪಾಣೆಮಂಗಳೂರು, ವಿದ್ಯಾಗಿರಿಯ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಮೆರವಣಿಗೆ, ಪರೇಡ್, ಬ್ಯಾಂಡ್, ಗಾಯನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.ಬೆಳಗ್ಗೆ ಆರಕ್ಷಕ ಇಲಾಖೆ, ಗೃಹರಕ್ಷಕ ದಳ ಮತ್ತು ವಿದ್ಯಾರ್ಥಿಗಳ ಪಥ ಸಂಚಲನ ನಡೆಯಿತು. ಪೊಲೀಸ್ ನಿರೀಕ್ಷಕ ಅನಂತಪದ್ಮನಾಭ ಹಾಗೂ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.