ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಹಾಗೂ ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ, ಬಂಟ್ವಾಳ ವಲಯ ಮಟ್ಟದ 14 ಮತ್ತು 17 ರ ವಯೋಮಾನದ ಬಾಲಕ ಬಾಲಕಿಯರ ಕ್ರೀಡಾಕೂಟವು ಶಾಲಾ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 21 ಮತ್ತು 22 ರಂದು ಅತ್ಯಂತ ಉತ್ಸಾಹದಿಂದ ಜರುಗಿತು.
ಶಾಲಾ ಸಂಚಾಲಕರಾದ ಅತೀ ವಂದನೀಯ ಫಾದರ್ ವಿಕ್ಟರ್ ಡಿಸೋಜ ಅಧ್ಯಕ್ಷತೆ ವಹಿಸಿ, ಕ್ರೀಡಾಕೂಟವನ್ನು ಉದ್ಘಾಟಿಸಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಜಗದೀಶ್ ರೈ ತಮ್ಮ ಸ್ಫೂರ್ತಿದಾಯಕ ನುಡಿಗಳಿಂದ ಕ್ರೀಡಾಪಟುಗಳನ್ನು ಹುರಿದುಂಬಿಸಿದರು. ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯಾದ ಮಾಲತಿ ಕೆ. ಮಾತನಾಡಿ, ಕ್ರೀಡಾಕೂಟಕ್ಕೆ ಶುಭ ಹಾರೈಸಿದರು.
ವೇದಿಕೆಯಲ್ಲಿ ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ವಂದನೀಯ ಫಾದರ್ ಮೆಲ್ವಿನ್ ಲೋಬೊ, ಚರ್ಚ್ನ ಸಹಾಯಕ ಧರ್ಮಗುರುಗಳಾದ ವಂದನೀಯ ಫಾದರ್ ಪ್ರಮೋದ್ ಕ್ರಾಸ್ತಾ, ನಿಕಟಪೂರ್ವ ದೈಹಿಕ ಶಿಕ್ಷಕರಾದ ಶಿವಪ್ರಸಾದ್ ರೈ, ಶಿಕ್ಷಣ ಸಂಯೋಜಕಿ ಪ್ರತಿಮಾ, ಬಂಟ್ವಾಳ ನೋಡಲ್ ಅಧಿಕಾರಿಗಳಾದ ಜಯಂತ್ ಹಾಗೂ ಚಂದ್ರಹಾಸ ಶೆಟ್ಟಿ, ದೈಹಿಕ ಪರಿವೀಕ್ಷಣಾಧಿಕಾರಿಯಾದ ಆಶಾ ನಾಯಕ್, ಶಿಕ್ಷಣ ಸಂಯೋಜಕರಾದ ರಮಾನಂದ, ಪೊಳಲಿ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಸುಬ್ರಹ್ಮಣ್ಯ ಪೈ, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಜೋನ್ ಗೋಮ್ಸ್, ಇನ್ಫೆಂಟ್ ಜೀಸಸ್ ಅನುದಾನಿತ ಶಾಲಾ ಮುಖ್ಯೋಪಾಧ್ಯಾಯಿನಿ ತೆರೇಸಾ ಡಿಮೆಲ್ಲೊ, ದೀಪಿಕಾ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಸಾಧು ಸರ್ ಮೊದಲಾದವರು ಉಪಸ್ಥಿತರಿದ್ದರು.
ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿಯಾದ ಅನಿತಾ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕರಾದ ಕಿಶೋರ್ ಸ್ವಾಗತಿಸಿ, ಸಹಶಿಕ್ಷಕಿ ಉಷಾ ವಂದಿಸಿದರು.