ಹಿರಿಯ ಸಾಹಿತಿ, ವಿಜ್ಞಾನಿ ಡಾ. ವ್ಯಾಸರಾವ್ ನಿಂಜೂರು ಇನ್ನಿಲ್ಲ – ಅವರ ಕುರಿತು ವಿವರಗಳು ಇಲ್ಲಿವೆ

ಹಿರಿಯ ಸಾಹಿತಿ, ವಿಜ್ಞಾನಿ ಡಾ. ವ್ಯಾಸರಾವ ನಿಂಜೂರು ಇನ್ನಿಲ್ಲ

ಹಿರಿಯ ಸಾಹಿತಿ, ಸಂಶೋಧಕ ಹಾಗೂ ಭಾಭಾ ಪರಮಾಣು ಸಂಶೋಧನಾ ಕೇಂದ್ರದ (BARC) ವಿಶ್ರಾಂತ ವಿಜ್ಞಾನಿ ಡಾ. ವ್ಯಾಸರಾವ್ ನಿಂಜೂರು (86) ಅವರು ಮಂಗಳವಾರ (ನವೆಂಬರ್ 3, 2026) ಬೆಳಿಗ್ಗೆ ಮುಂಬೈನಲ್ಲಿ ನಿಧನರಾದರು. ಪುತ್ರ, ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅವರು ಅಗಲಿದ್ದಾರೆ.

ವ್ಯಾಸರಾವ್ ನಿಂಜೂರ್‌ ಉಡುಪಿ ಜಿಲ್ಲೆಯ ತೆಂಕನಿಡಿಯೂರಿನಲ್ಲಿ 1940ರ ಅಕ್ಟೋಬರ್ 6ರಂದು ಜನಿಸಿದರು. ತಂದೆ ಶ್ರೀನಿವಾಸ ನಿಂಜೂರ್. ತಾಯಿ ಸೀತಮ್ಮ. ಶಾಲಾ ಶಿಕ್ಷಣವನ್ನು ಗರಡಿ ಮಜಲು, ಕೊಡವೂರು, ಮಿಲಾಗ್ರಿಸ್ ಹೈಸ್ಕೂಲು ಮುಂತಾದೆಡೆ ಪಡೆದರು.. ಉಡುಪಿಯ ಎಂ.ಜಿ.ಎಂ. ಕಾಲೇಜಿನಿಂದ ಬಿ.ಎಸ್ಸಿ ಓದಿ ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎಸ್ಸಿ ಹಾಗೂ ಮುಂಬಯಿ ವಿಶ್ವವಿದ್ಯಾಲಯ ಮತ್ತು ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯಗಳಿಂದ  ಪಿಎಚ್.ಡಿ ಗಳಿಸಿದರು.

ಬಳಿಕ ಮಣಿಪಾಲದ ಕಸ್ತೂರ್ ಬಾ ಮೆಡಿಕಲ್ ಕಾಲೇಜಿನಲ್ಲಿ ಬಯೋಕೆಮಿಸ್ಟ್ರಿ ವಿಭಾಗದಲ್ಲಿ ಉಪನ್ಯಾಸಕರಾಗಿ ವೃತ್ತಿ ಪ್ರಾರಂಭ ಮಾಡಿದರು. ಮುಂದೆ ಮುಂಬೈನ ಭಾಭಾ ಪರಮಾಣು ಸಂಶೋಧನ ಕೇಂದ್ರದ ಬಯೋ ಕೆಮಿಸ್ಟ್ರಿ ಮತ್ತು ಆಹಾರ ತಂತ್ರಜ್ಞಾನ ವಿಭಾಗದಲ್ಲಿ ಆಹಾರ ವಿಜ್ಞಾನ ಶಾಖೆಯ ಪ್ರಮುಖ ಹುದ್ದೆ ನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದರು.  ನಿವೃತ್ತಿಯ ನಂತರ ಮುಂಬೈ ವಿಶ್ವವಿದ್ಯಾಲಯದಲ್ಲಿ ಜೀವರಸಾಯನ ಶಾಸ್ತ್ರದ ಸಂದರ್ಶಕ ಪ್ರಾಧ್ಯಾಪಕರಾಗಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡಿದರು. ಭಾಭಾ ಪರಮಾಣು ಕೇಂದ್ರದಲ್ಲಿದ್ದಾಗ ವ್ಯಾಸರಾವ್ ನಿಂಜೂರ್ ಅವರ 87 ಸಂಶೋಧನ ಪ್ರಬಂಧಗಳು ಪ್ರತಿಷ್ಠಿತ ಪತ್ರಿಕೆಗಳಲ್ಲಿ ಪ್ರಕಟಗೊಂಡವು. ಅಂತರಕೋಶೀಯ ಲೈಸೋಸೋಮ್ ಮತ್ತು ಲೈಸೋಸೋಮ್ ಕಿಣ್ವಗಳ ಬಗ್ಗೆ  ಅವರು ವಿಶೇಷ ಸಂಶೋಧನೆ ನಡೆಸಿದರು. ಆಹಾರ ವಿಜ್ಞಾನ, ಆಹಾರ ಸಂಸ್ಕರಣೆ ಮತ್ತು ಸಂರಕ್ಷಣೆ ಅವರ ಸಂಶೋಧನೆ ಕ್ಷೇತ್ರಗಳು. ಆಹಾರ ಸಂರಕ್ಷಣೆಯಲ್ಲಿ ಗಾಮಾ ವಿಕಿರಣಗಳ ಬಳಕೆ, ಪ್ರೊಟೀನ್ ನ್ಯೂನತೆಯ ಪ್ರಭಾವ, ಮಾನವ ಫಲೀಕರಣದಲ್ಲಿ ಕಿಣ್ವಗಳ ಪಾತ್ರ ಮುಂತಾದ ವಿಷಯಗಳಲ್ಲಿ ಅವರ ಸಂಶೋಧನೆಗಳು ವಿಶ್ವಮಾನ್ಯತೆ ಗಳಿಸಿದವು..

ಜಾಹೀರಾತು

ಸಾಹಿತ್ಯಿಕ ಕೊಡುಗೆ ಮತ್ತು ಸಾಧನೆ

ವಿಜ್ಞಾನ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರೂ ಕನ್ನಡ ಸಾಹಿತ್ಯ, ಭಾಷೆ ಮತ್ತು ಸಂಸ್ಕೃತಿಯ ಮೇಲೆ ಅಪಾರ ಪ್ರೀತಿ ಹೊಂದಿದ್ದ ಇವರು ತಮ್ಮದೇ ಆದ ವಿಶಿಷ್ಟ ಬರವಣಿಗೆಯ ಶೈಲಿಯಿಂದ ಗುರುತಿಸಿಕೊಂಡಿದ್ದರು. ವ್ಯಾಸರಾವ್ ನಿಂಜೂರ್ ಅವರ ಉಸಿರು ಕಾದಂಬರಿಗೆ ತ್ರಿವೇಣಿ ಸ್ಮಾರಕ ಪ್ರಶಸ್ತಿ, ಚಾಮುಂಡೇಶ್ವರಿ ಭವನ ಕಾದಂಬರಿಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ವರ್ಧಮಾನ ಪ್ರಶಸ್ತಿ, ಕರ್ನಾಟಕ ನಾಟಕ ಅಕಾಡಮಿ ಫೆಲೋಷಿಪ್, ಮೂಡಬಿದಿರೆ 71ನೇ ಸಾಹಿತ್ಯ ಸಮ್ಮೇಳನದಲ್ಲಿ ‘ಕರ್ನಾಟಕ ಶ್ರೀ  ಪ್ರಶಸ್ತಿ. ಮಹಾರಾಷ್ಟ್ರದ 6ನೆಯ ಸಾಂಸ್ಕೃತಿಕ ಸಮಾವೇಶದಲ್ಲಿ ‘ಮಹಾರಾಷ್ಟ್ರದ ಶ್ರೇಷ್ಠ ಕನ್ನಡಿಗ’ ಪ್ರಶಸ್ತಿ ಮುಂತಾದ ಅನೇಕ ಗೌರವಗಳು ಸಂದಿವೆ.

ಕಾದಂಬರಿಗಳು: ‘ಉಸಿರು’, ‘ಚಾಮುಂಡೇಶ್ವರಿ ಭವನ’, ‘ತೆಂಕನಿಡಿಯೂರಿನ ಕುಳುವಾರಿಗಳು’.  ಆತ್ಮಕಥನ / ಕೃತಿಗಳು: ‘ಎಳೆದ ತೇರು’, ಮಕ್ಕಳಿಗಾಗಿ ‘ಹೋಮಿ ಭಾಭಾ’. ನಾಟಕ: ‘ನಲ್ವತ್ತರ ನಲುಗು’ (ಹಲವಾರು ನಾಟಕಗಳಲ್ಲಿ ಅಭಿನಯ ಕೂಡ ಮಾಡಿದ್ದಾರೆ). ಸಂಘಟನೆ & ಪತ್ರಿಕೋದ್ಯಮ: ಮುಂಬೈ ಕನ್ನಡಿಗರ ಸಾಂಸ್ಕೃತಿಕ ಕೊಂಡಿಯಾಗಿ ಕೆಲಸ ಮಾಡಿದ ಇವರು ‘ಬೆಳಗು’, ‘ಗೋಕುಲವಾಣಿ’ ಮುಂತಾದ ನಿಯತಕಾಲಿಕೆಗಳಿಗೆ ಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. ಸಮ್ಮೇಳನಾಧ್ಯಕ್ಷತೆ: 2006ರಲ್ಲಿ ಇನ್ನಾದಲ್ಲಿ ನಡೆದ ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

ಪ್ರಶಸ್ತಿ ಮತ್ತು ಗೌರವಗಳು

  • ‘ಉಸಿರು’ ಕಾದಂಬರಿಗೆ ತ್ರಿವೇಣಿ ಸ್ಮಾರಕ ಪ್ರಶಸ್ತಿ
  • ‘ಚಾಮುಂಡೇಶ್ವರಿ ಭವನ’ ಕಾದಂಬರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಾಗೂ ವರ್ಧಮಾನ ಪ್ರಶಸ್ತಿ
  • ಕರ್ನಾಟಕ ನಾಟಕ ಅಕಾಡೆಮಿ ಫೆಲೋಶಿಪ್
  • ಮೂಡುಬಿದಿರೆಯ 71ನೇ ಸಾಹಿತ್ಯ ಸಮ್ಮೇಳನದಲ್ಲಿ ‘ಕರ್ನಾಟಕ ಶ್ರೀ ಪ್ರಶಸ್ತಿ’
  • ಮಹಾರಾಷ್ಟ್ರ ಸಾಂಸ್ಕೃತಿಕ ಸಮಾವೇಶದಲ್ಲಿ ‘ಮಹಾರಾಷ್ಟ್ರದ ಶ್ರೇಷ್ಠ ಕನ್ನಡಿಗ ಪ್ರಶಸ್ತಿ’

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಹಿರಿಯ ಸಾಹಿತಿ, ವಿಜ್ಞಾನಿ ಡಾ. ವ್ಯಾಸರಾವ್ ನಿಂಜೂರು ಇನ್ನಿಲ್ಲ – ಅವರ ಕುರಿತು ವಿವರಗಳು ಇಲ್ಲಿವೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*