ರಾತ್ರಿ ಶಾಲೆಯಲ್ಲಿ ಓದಿದ ಸಿಎ ಪದವೀಧರ ಶ್ರೀನಿವಾಸ ಸಪಲ್ಯ ಅವರ ಬಹುಮುಖ ಪ್ರತಿಭೆಗೆ ಒಲಿದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಬಂಟ್ವಾಳ: ಇಲ್ಲಿನ ರಾಯಿ ಗ್ರಾಮೀಣ ಪ್ರದೇಶದಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿ ಬಳಿಕ ಮುಂಬೈ ಮಹಾನಗರದಲ್ಲಿ ಕ್ಯಾಂಟೀನ್  ಮತ್ತಿತರ ಕಡೆಗಳಲ್ಲಿ ದುಡಿದು ರಾತ್ರಿ ಶಾಲೆಯಲ್ಲೇ ಓದಿ ಡಬಲ್ ಪದವಿ (ಎಂಬಿಎ ಮತ್ತು ಸಿಎ) ಗಳಿಸಿದ ಸಾಧಕ ಶ್ರೀನಿವಾಸ ಪಿ.ಸಪಲ್ಯ ರಾಯಿ ಇವರಿಗೆ ಪ್ರಸಕ್ತ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ.

ರಾಯಿ ಮತ್ತು ಕೊಯಿಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತನ್ನ ಪ್ರಾಥಮಿಕ ಶಿಕ್ಷಣ ಮುಗಿಸಿದ ಬಳಿಕ ಆರ್ಥಿಕ ಸಂಕಷ್ಟದಿಂದ ಮುಂಬೈ ಪೋಟ್  ಮಿಲಿಟರಿ ಕ್ಯಾಂಟೀನ್ ಮತ್ತಿತರ ಕಡೆಗಳಲ್ಲಿ ದುಡಿದು, ಅಲ್ಲಿನ ಕೆನರಾ ವಿದ್ಯಾದಾಯಿನಿ ರಾತ್ರಿ ಶಾಲೆಯಲ್ಲಿ ಪ್ರೌಢಶಿಕ್ಷಣ ಮತ್ತು ಕನ್ನಡ ಭವನ ಜೂನಿಯರ್ ಕಾಲೇಜಿನಲ್ಲಿ ಪಿಯೂಸಿ ಶಿಕ್ಷಣ ಹಾಗೂ ಪ್ರತಿಷ್ಠಿತ ಸೈಂಟ್ ಕ್ಷೇವಿಯರ್ ಕಾಲೇಜಿನಲ್ಲಿ ವಾಣಿಜ್ಯ ಪದವಿ ಶಿಕ್ಷಣ ಗಳಿಸಿದ್ದಾರೆ. ಹೈದರಾಬಾದ್ ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್ (ಐ ಎಸ್ ಬಿ) ಸಂಸ್ಥೆಯಲ್ಲಿ ಎಂಬಿಎ ಮತ್ತು ಚಾರ್ಟ ಡ್  ಎಕೌಂಟೆಂಟ್ ಪದವಿ ಪೂರ್ಣಗೊಳಿಸಿದ್ದಾರೆ.

VNR GOLD

ಪ್ರಸಕ್ತ ಮುಂಬೈ ಜೆ.ಬಿ.ಅಡ್ವಾಣಿ ಕಂಪೆನಿ ಸಂಸ್ಥೆಯಲ್ಲಿ ಹಿರಿಯ ಉಪಾಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇವರು ಮುಂಬೈನ ಬೊರಿವಿಲಿ ತುಳು ಸಂಘ ಸಹಿತ ಮಾಟುಂಗ ಮತ್ತು ಗೋರೆಗಾಂವ್ ಕರ್ನಾಟಕ ಸಂಘ, ಮಲಾಡ್ ಶನಿ ಮಹಾತ್ಮಾ ಚಾರಿಟೇಬಲ್ ಸೊಸೈಟಿ ಅಧ್ಯಕ್ಷರಾಗಿ, ಯಕ್ಷಗಾನ ಕಲಾವಿದನಾಗಿ, ಭಾಗವತರಾಗಿಯೂ ಗುರುತಿಸಿಕೊಂಡಿದ್ದಾರೆ. ಕಳೆದ ೯ ವರ್ಷಗಳಿಂದ ಮುಂಬೈ ಸಾಫಲ್ಯ ಸೇವಾ ಸಂಘದ ಅಧ್ಯಕ್ಷರಾಗಿ ಮಹಾರಾಷ್ಟ್ರ ರಾಜ್ಯದಲ್ಲಿ ಗಾಣಿಗ ಸಮುದಾಯವನ್ನು ಹಿಂದುಳಿದ ವರ್ಗ (ಎ) ಗೆ ಸೇರ್ಪಡೆಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜಾಹೀರಾತು

ಪ್ರತೀ ವರ್ಷ ನೂರಾರು ಮಂದಿ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಸ್ವಾವಲಂಬನೆಗೆ ಪ್ರೋತ್ಸಾಹ, ನಿರ್ಗತಿಕರಿಗೆ ವಸತಿ, ಪಡಿತರ ಸಾಮಾಗ್ರಿ ವಿತರಣೆ ಹೀಗೆ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಕೊಡುಗೆ ಸಲ್ಲಿಸುತ್ತಿರುವ ಇವರ ಬಹುಮುಖ ಪ್ರತಿಭೆಗೆ ಮುಂಬೈ ವಿಶ್ವವಿದ್ಯಾನಿಲಯ ಗೌರವಾರ್ಪಣೆ ಸಹಿತ ಜಯ ಸುವರ್ಣ ಸಮಾಜ ರತ್ನ ಪ್ರಶಸ್ತಿ ಸೇರಿದಂತೆ ಪದ್ಮಶಾಲಿ ಸೊಸೈಟಿ ಮತ್ತಿತರ ೧೦ಕ್ಕೂ ಮಿಕ್ಕಿ ಸಂಘ ಸಂಸ್ಥೆಗಳು ಇವರ ಬಹುಮುಖ ಪ್ರತಿಭೆಗೆ ಪ್ರಶಸ್ತಿ ನೀಡಿ ಗೌರವಿಸಿದೆ.

* ಈ ಬಾರಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ದೊರೆತಿರುವುದು ಇವರ ಸಮಾಜಮುಖಿ ಚಟುವಟಿಕೆಗೆ ಮತ್ತಷ್ಟು ಹೆಚ್ಚಿನ ಶಕ್ತಿ ನೀಡಿದಂತಾಗಿದೆ ಎಂದು ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕ  ಕೆ.ರಮೇಶ್ ನಾಯಕ್ ರಾಯಿ ಹೇಳಿದ್ದಾರೆ.

 ಬಾಲ್ಯದಲ್ಲಿ ಶಿಕ್ಷಣ ಪಡೆಯಲು ತನ್ನಂತೆ ಇತರ ಬಡ ಮಕ್ಕಳು ಕಷ್ಟ ಅನುಭವಿಸಬಾರದು ಎಂಬ ಕಳಕಳಿ ಶ್ರೀನಿವಾಸ ಅವರಲ್ಲಿದೆ ಎಂದು ಅವರ ಸಹೋದರ ಮಧುಕರ ಬಂಗೇರ ರಾಯಿ ತಿಳಿಸಿದ್ದಾರೆ.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ರಾತ್ರಿ ಶಾಲೆಯಲ್ಲಿ ಓದಿದ ಸಿಎ ಪದವೀಧರ ಶ್ರೀನಿವಾಸ ಸಪಲ್ಯ ಅವರ ಬಹುಮುಖ ಪ್ರತಿಭೆಗೆ ಒಲಿದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*