ಬಂಟ್ವಾಳ

ಬಂಟ್ವಾಳ: ಮಂಚಿಯಲ್ಲಿ ‘ಪ್ರಜಾ ಸೇವಾ’ ಕಾರ್ಯಕ್ರಮ – 75 ಸಾರ್ವಜನಿಕ ಅಹವಾಲು ಸ್ವೀಕಾರ

ಬಂಟ್ವಾಳ: ಪ್ರಜಾ ಸೇವಾ ಕಾರ್ಯಕ್ರಮವು ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಅದಕ್ಕೆ ಸೂಕ್ತ ಪರಿಹಾರ ಒದಗಿಸಲು ಉತ್ತಮ ವೇದಿಕೆಯಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ತಿಳಿಸಿದರು.

VNR GOLD

ಶನಿವಾರ ಮಂಚಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ತಾಲೂಕು ಮಟ್ಟದ ‘ಪ್ರಜಾ ಸೇವಾ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

 ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಕಾಲಮಿತಿಯಲ್ಲಿ ಪರಿಹಾರ ಒದಗಿಸಬೇಕು. ಆದ್ದರಿಂದ ಪ್ರಜಾ ಸೇವಾ ಕಾರ್ಯಕ್ರಮದಲ್ಲಿ ಸ್ವೀಕೃತವಾಗುವ ಎಲ್ಲಾ ಅರ್ಜಿಗಳನ್ನು ಅಧಿಕಾರಿಗಳು ನಿಗದಿತ ಅವಧಿಯಲ್ಲಿ ಪರಿಶೀಲಿಸಿ, ತ್ವರಿತವಾಗಿ ಪರಿಹಾರ ಒದಗಿಸಬೇಕು” ಎಂದು ಸೂಚಿಸಿದರು.

ಜಾಹೀರಾತು

ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಒಟ್ಟು 75 ವಿವಿಧ ಅರ್ಜಿಗಳು ಹಾಗೂ ಅಹವಾಲುಗಳು ಸ್ವೀಕೃತಗೊಂಡವು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ಬಂಟ್ವಾಳ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಿರಡ್ಡಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ವಿಶ್ವನಾಥ ಮುದಜ್ಜಿ ಸೇರಿದಂತೆ  ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್ ವಂದಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.