ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ದ.ಕ. ಜಿಲ್ಲೆ ಇವುಗಳ ಜಂಟಿ ಆಶ್ರಯದಲ್ಲಿ ಮಂಗಳೂರಿನ ಕದ್ರಿಯ ಜಿಲ್ಲಾ ಬಾಲಭವನದಲ್ಲಿ ನಡೆದ ೨೦೨೬-೨೭ ನೇ ಸಾಲಿನ ಮಕ್ಕಳ ದಿನಾಚರಣೆ ಅಂಗವಾಗಿ ‘ಜಿಲ್ಲಾ ಮಟ್ಟದ ಕಲಾಶ್ರೀ ಆಯ್ಕೆ ಶಿಬಿರ’ ಹಾಗೂ ಸ್ಪರ್ಧೆಗಳು ಜರುಗಿದವು.ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಕನ್ನಡ ಮಾಧ್ಯಮ ಶಾಲೆಯ ಒಟ್ಟು ೨೨ ವಿದ್ಯಾರ್ಥಿಗಳು ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿ ವಿವಿಧ ಬಹುಮಾನಗಳನ್ನು ಪಡೆದುಕೊಂಡಿದ್ದಾರೆ.
ಹಿಮಾನಿ.ಕೆ (೫ನೇ ತರಗತಿ): ಸೃಜನಾತ್ಮಕ ಕಲೆ (ಏಕಪಾತ್ರ ಅಭಿನಯ) ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಪ್ರಥ್ವಿಕ್ (೭ನೇ ತರಗತಿ): ವಿಜ್ಞಾನ ನೂತನ ಆವಿಷ್ಕಾರ (ಬಹುಪಯೋಗಿ ಕೃಷಿ ಮಿತ್ರ) ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಯಶವಂತ (೭ನೇ ತರಗತಿ) : ಯೋಗ ನೃತ್ಯ ಸ್ಪರ್ಧೆಯಲ್ಲಿ ತೃತೀಯ ಸ್ಥಾನ, ಮನ್ವಿತ್ಕುಲಾಲ್ (೭ನೇ ತರಗತಿ): ವಿಜ್ಞಾನ ನೂತನ ಆವಿಷ್ಕಾರ (ಅಡಿಕೆ ಹೆಕ್ಕುವ ಸಾಧನ) ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ.