ಆಲದಪದವು: “ಪ್ರಕೃತಿ ಜ್ಞಾನಧಾಮ” ಶೈಕ್ಷಣಿಕ ಸೇವಾ ಸಂಸ್ಥೆ ಉದ್ಘಾಟನೆ

ಬಂಟ್ವಾಳ: ಚೆನ್ನೈತ್ತೋಡಿ ಗ್ರಾಮ ಪಂಚಾಯತು ವ್ಯಾಪ್ತಿಯ ಅಜ್ಜಿಬೆಟ್ಟು ಗ್ರಾಮದ ಆಲದಪದವು ಎಂಬಲ್ಲಿ “ಪ್ರಕೃತಿ ಜ್ಞಾನಧಾಮ”(ನಿಸರ್ಗದತ್ತ ಜೀವನ ಮತ್ತು ಮೌಲ್ಯಾಧಾರಿತ ಶಿಕ್ಷಣ) ಶೈಕ್ಷಣಿಕ ಸೇವಾ ಸಂಸ್ಥೆ ಉದ್ಘಾಟನೆಗೊಂಡಿತು.

ಪೊಳಲಿ ಮಾದುಕೋಡಿ ಶ್ರೀ ಕೊರಗಜ್ಜ ಸಾನಿಧ್ಯದ ಆಡಳಿತ ಧರ್ಮದರ್ಶಿ, ಶ್ರೀ ಸಾಯಿ ಹೀಲಿಂಗ್ ಸೆಂಟರ್ ನ ಹಿರಿಯ ಗುರುಗಳಾದ ವಿಜಯ ಸುವರ್ಣ ಗುರೂಜಿಯವರು ದೀಪ ಬೆಳಗಿಸಿ, ನಂತರ ಗಿಡನೆಟ್ಟು ಸಂಸ್ಥೆಯನ್ನು ಉದ್ಘಾಟಿಸಿದರು.   

Bhadra Home Appliances

ಬಳಿಕ ಸಂಸ್ಥೆಯ ಸೇವಾ ವಿವರದ ಕರಪತ್ರವನ್ನು ಗುರೂಜಿ ಬಿಡುಗಡೆಗೊಳಿಸಿ ಆಶೀರ್ವದಿಸಿದರು. ಪಿಲಾತಬೆಟ್ಟು ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಂ.ತುಂಗಪ್ಪ ಬಂಗೇರಾ, ರಾಷ್ಟ್ರಪ್ರಶಸ್ತಿ ಪುರಸ್ಕ್ರತ ನಿವೃತ್ತ ಮುಖ್ಯ ಶಿಕ್ಷಕ ಕೆ.ರಮೇಶ ನಾಯಕ್ ರಾಯಿ, ಇರ್ವತ್ತೂರು ಪದವು ಶ್ರೀ ಶಾರದ ಸೇವಾ ಟ್ರಸ್ಟ್ ಅಧ್ಯಕ್ಷ ಡಾ.ರಾಮಕೃಷ್ಣ ಎಸ್., ಸಿರಿಗುಂಡದಪಾಡಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಮೋಹನ್ ಶೆಟ್ಟಿ ನರ್ವಲ್ದಡ್ಡ, ಯಕ್ಷಧ್ರುವ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕದ ಅಧ್ಯಕ್ಷ ಟಿ.ಹರೀಂದ್ರ ಪೈ, ಶ್ರೀ ಶಾರದ ಸೇವಾ ಟ್ರಸ್ಟ್ ಉಪಾಧ್ಯಕ್ಷ ಶೇಖರ್ ಪೂಜಾರಿ ಅಗಲ್ದೋಡಿ, ಇರ್ವತ್ತೂರು ಪದವು ಶ್ರೀ ಶಾರದೋತ್ಸವ ಸೇವಾ ಸಮಿತಿ ಅಧ್ಯಕ್ಷ ಸುದೀಂದ್ರ ಶೆಟ್ಟಿ ಎರ್ಮೆನಾಡು, ವಾಮದಪದವು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಚೇತನ್ ಕುಮಾರ್ ಕುದ್ಕಂದೋಡಿ, ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಪ್ರಶಾಂತ್ ಕೋಟ್ಯಾನ್ ಮೇಗಿನಮನೆ ಮೊದಲಾದವರು ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.

ಜಾಹೀರಾತು

ಪ್ರಕೃತಿ ಜ್ಞಾನಧಾಮದ ಪ್ರಧಾನ ಶಿಕ್ಷಕ  ಗೋಪಾಲ ಅಂಚನ್ ಪ್ರಾಸ್ತಾವಿಕ ಮಾತುಗಳನ್ನಾಡಿ ಈ ಸಂಸ್ಥೆಯು  ವಿದ್ಯಾರ್ಥಿಗಳಿಗೆ, ಯುವಜನರಿಗೆ ಮತ್ತು ಆಸಕ್ತರಿಗೆ ನೈಸರ್ಗಿಕ ಜೀವನ ವಿಧಾನ,  ಜೀವನ ಕೌಶಲ್ಯ, ಜೀವನ ಮೌಲ್ಯ, ಪರಿಸರ ಸಂರಕ್ಷಣೆ, ಡಿಜಿಟಲ್ ಡಿಟಾಕ್ಸ್, ಮಾನವೀಯ ಮೌಲ್ಯ, ಪ್ರಕೃತಿ ಪ್ರೀತಿ ಮೊದಲಾದ ಮೂವತ್ತಕ್ಕೂ ಹೆಚ್ಚು ವಿಷಯಗಳಲ್ಲಿ ಅನುಭವಿ ಶಿಕ್ಷಕರ ಮೂಲಕ ಶಿಕ್ಷಣ ನೀಡುವ ಸದುದ್ಧೇಶವನ್ನು ಹೊಂದಿದೆ ಎಂದು ಹೇಳಿದರು.     ಸಾಮಾಜಿಕ ಕಾರ್ಯಕರ್ತರಾದ ಸುಪ್ರೀತ್ ಜೈನ್ ಇರ್ವತ್ತೂರು ಬೀಡು, ಚಂದ್ರಶೇಖರ ಆಚಾರ್ಯ ಹಲೆಪ್ಪಾಡಿ, ದೀಪಕ್ ಮಾದುಕೋಡಿ, ರೋಹಿಣಿ ಮತ್ತು ಓಬಯ್ಯ ಬಂಗೇರಾ ದಂಪತಿ, ಸುಗಂಧಿ, ನೃತ್ಯ ಶಿಕ್ಷಕಿ ಪ್ರತಿಮ ಗೋಪಾಲ ಅಂಚನ್, ಯಕ್ಷ್, ಯೆತ್ವಿಕ್ ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಗುರೂಜಿಯವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಆಲದಪದವು: “ಪ್ರಕೃತಿ ಜ್ಞಾನಧಾಮ” ಶೈಕ್ಷಣಿಕ ಸೇವಾ ಸಂಸ್ಥೆ ಉದ್ಘಾಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*