ವಾಮದಪದವು

ಗೋಪಾಲ್ ಅಂಚನ್ ಚಿಕಿತ್ಸೆಗೆ ರಮಾನಾಥ ರೈ ನೆರವು

ಬಂಟ್ವಾಳ: ಕಳೆದ ಐದು ವರ್ಷಗಳಿಂದ ಅನಾರೋಗ್ಯದಲ್ಲಿದ್ದು ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಪತ್ರಕರ್ತ, ಆಲದಪದವು ಗೋಪಾಲ ಅಂಚನ್ ಮನೆಗೆ ಮಾಜಿ ಸಚಿವ ಬಿ.ರಮಾನಾಥ ರೈ ಮತ್ತು ಪ್ರಮುಖರು ಭೇಟಿ ನೀಡಿ ವೈದ್ಯಕೀಯ ಚಿಕಿತ್ಸೆಗೆ ಆರ್ಥಿಕ ಸಹಾಯಧನ ನೀಡಿದರು.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತರಾದ ಹಿನ್ನೆಲೆಯಲ್ಲಿ ಗೋಪಾಲ ಅಂಚನ್ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಜಾಹೀರಾತು

ಬಂಟ್ವಾಳ ನಗರಾಭಿವೃದ್ಧಿ  ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ನೆಲ್ಲಿಗುಡ್ಡೆ ಶ್ರೀ ಸಂಯುಕ್ತ ಕೃಷ್ಣ ಜನ್ಮಾಷ್ಠಮಿ ಸಮಿತಿ ಅಧ್ಯಕ್ಷ  ಬಾಲಕೃಷ್ಣ ಆರ್. ಅಂಚನ್, ವಾಮದಪದವು ವಲಯ ಯುವ ಬಂಟರ ಸಂಘದ ಅಧ್ಯಕ್ಷ ಪ್ರಜ್ವಲ್ ಶೆಟ್ಟಿ ಗಂಟಾರಬೆಟ್ಟು ಗುತ್ತು, ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಕುಂಡೋಳಿಗುತ್ತು, ಚೆನ್ನೈತ್ತೋಡಿ ಗ್ರಾಮ ಪಂಚಾಯತು ಮಾಜಿ ಅಧ್ಯಕ್ಷ ನವೀನ್ಚಂದ್ರ ಶೆಟ್ಟಿ ಅಜ್ಜಿಬೆಟ್ಟು, ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಕಿಶೋರ್ ಕುಮಾರ್ ನಾಯರ್ಕುಮೇರು, ಯತೀಶ್ ಶೆಟ್ಟಿ ವಿಜಯನಗರ, ಯುವನಾಯಕರಾದ ರಾಜೀವ ಗಟ್ಟಿ ಬಸ್ತಿಕೋಡಿ, ಸುರೇಶ್ ಶೆಟ್ಟಿ ನಂದಿಲ, ಹರೀಶ ಸಪಲ್ಯ ಆಲದಪದವು, ಲಿಂಗಪ್ಪ ಪೂಜಾರಿ ಶ್ರೀನಿವಾಸ ನಗರ ಮೊದಲಾದವರು ಉಪಸ್ಥಿತರಿದ್ದರು.


Bhadra Home Appliances
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.