ಬಂಟ್ವಾಳ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಲ್ಲಡ್ಕದಲ್ಲಿ ಎಸ್‌ಡಿಪಿಐ ಪ್ರತಿಭಟನೆ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ ಟಿಕೆಟ್ ದರ, ಹಾಲಿನ ದರ ಹಾಗೂ ಇತರ ಅಗತ್ಯ ವಸ್ತುಗಳ ದರಏರಿಕೆ ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ ಪ್ರತಿಭಟನೆಯ ಭಾಗವಾಗಿ ಎಸ್.ಡಿ.ಪಿ.ಐ ಕಲ್ಲಡ್ಕ ಬ್ಲಾಕ್ ಸಮಿತಿ ವತಿಯಿಂದ ಕಲ್ಲಡ್ಕ ಜಂಕ್ಷನ್ ನಲ್ಲಿ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.

ಎಸ್.ಡಿ.ಪಿ.ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಆರ್ಥಿಕ ನೀತಿಗಳ ಬಗ್ಗೆ ಟೀಕಿಸಿದರು, ಜನರು ಪ್ರತಿಬಟಿಸುವ ಮನೋಭಾವನೆಯ ಕೊರತೆ ಮತ್ತು ಮುಂದೆ ಅದರ ನಷ್ಟಗಳು ಸಾಮಾನ್ಯ ಜನತೆ ಎದುರಿಸಬೇಕಾದ ಸಮಸ್ಯೆಗಳ ಬಗ್ಗೆ ವಿವರಿಸಿದರು.

ಸಭೆಯಲ್ಲಿ ಮಾತನಾಡಿದ ಎಸ್.ಡಿ.ಪಿ.ಐ ಕಲ್ಲಡ್ಕ ಬ್ಲಾಕ್ ಸಮಿತಿ ಸದಸ್ಯರಾದ ಸಿದ್ದೀಕ್ ಪನಾಮ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಬೆಲೆ ಏರಿಕೆ ನೀತಿಯಿಂದಾಗಿ ಮಧ್ಯಮ ವರ್ಗದವರಿಗೆ, ಕಾರ್ಮಿಕರ ಮೇಲೆ ಆಗುತ್ತಿರುವ ಆರ್ಥಿಕ ಹೊಡೆತದ ಕುರಿತು ತಿಳಿಸಿದರು.

ಜಾಹೀರಾತು

ಅಧ್ಯಕ್ಷತೆಯನ್ನು ಕಲ್ಲಡ್ಕ ಬ್ಲಾಕ್ ಸಮಿತಿ ಅಧ್ಯಕ್ಷರಾದ ಸತ್ತಾರ್ ಕಲ್ಲಡ್ಕ ವಹಿಸಿದ್ದರು. ಈ ಸಂಧರ್ಭದಲ್ಲಿ ಬ್ಲಾಕ್ ಸಮಿತಿ ಕಾರ್ಯದರ್ಶಿ ಅನ್ವರ್ ಆಲಡ್ಕ, ಗೊಳ್ತಮಜಲು ಗ್ರಾಮ ಸಮಿತಿ ಅಧ್ಯಕ್ಷರಾದ ಜವಾಜ್ ಕಲ್ಲಡ್ಕ ಹಾಗೂ ಇತರರು ಉಪಸ್ಥಿತರಿದ್ದರು. ಬ್ಲಾಕ್ ಸಮಿತಿ ಜೊತೆ ಕಾರ್ಯದರ್ಶಿಗಳಾದ ಹಮೀದ್ ಅಲಿ ಸ್ವಾಗತಿಸಿ, ಮನ್ಸೂರ್ ಕಲ್ಲಡ್ಕ ಕಾರ್ಯಕ್ರಮ ನಿರೂಪಿಸಿದರು.

Bhadra Home Appliances
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts