ಬಂಟ್ವಾಳ

ಬಂಟ್ವಾಳ: ರೈತರಿಗೆ ಅರಿವು ಕಾರ್ಯಕ್ರಮ

ಬಿ.ಸಿ.ರೋಡಿನಲ್ಲಿರುವ ಎಸ್‌ಜಿಎಸ್‌ವೈ ತಾಲೂಕು ಪಂಚಾಯತ್‌ ಸಭಾಭವನದಲ್ಲಿ ಪಿಎಂಆರ್‌ಕೆವಿವೈ ‘ವಿವೇಚನಾಯುಕ್ತ ಪೀಡೆನಾಶಕ ಬಳಕೆ ಕುರಿತ ರೈತ ಅರಿವು ಕಾರ್ಯಕ್ರಮ’ದಡಿ ಸುರಕ್ಷಿತ ಕೀಟನಾಶಕಗಳ ಬಳಕೆ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ ಏರ್ಪಡಿಸಲಾಯಿತು.

Bhadra Home Appliances

ಅಧ್ಯಕ್ಷತೆಯನ್ನು ತಾಲೂಕು ಪಂಚಾಯತ್‌ನ ಸಹಾಯಕ ನಿರ್ದೇಶಕ ವಿಶ್ವನಾಥ್‌ ವಹಿಸಿದ್ದರು. ಬಂಟ್ವಾಳ ತಾಲೂಕು ಸಹಾಯಕ ಕೃಷಿ ನಿರ್ದೇಶಕಿ ವೀಣಾ ಕೆ.ಆರ್‌. ಪ್ರಾಸ್ತಾವಿಕವಾಗಿ ಮಾತನಾಡಿದರು.

ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಜೋ ಪ್ರದೀಪ್‌ ಡಿ’ಸೋಜಾ ಅವರು ವಿವೇಚನಾಯುಕ್ತ ಪೀಡೆನಾಶಕ ಬಳಕೆ ಕುರಿತು ರೈತರಿಗೆ ಮಾಹಿತಿ ನೀಡಿದರು. ಕೃಷಿ ಅಧಿಕಾರಿ (ತಾಂತ್ರಿಕ) ನಂದನ್‌ ಶೆಣೈ ಪಿ. ಅವರು ರೈತರಿಗೆ ‘ಮುಖ್ಯಮಂತ್ರಿ ನೇಗಿಲ ಯೋಜನೆ’ ಹಾಗೂ ‘ರಸಗೊಬ್ಬರ ಮಾರಾಟ ಚೌಕಟ್ಟು’ ಮೊಬೈಲ್‌ ಆಪ್‌ ಕುರಿತು ತಾಂತ್ರಿಕ ಮಾಹಿತಿ ನೀಡಿದರು. ಆತ್ಮ  ಪಾಣೆಮಂಗಳೂರು ವಿಭಾಗದ ಎಟಿಎಂ ಹನಮಂತ ಕಾಳಗಿ ಕೃಷಿ ಇಲಾಖೆಯ ವಿವಿಧ ಯೋಜನೆಗಳ ಮಾಹಿತಿ ನೀಡಿದರು.

ಜಾಹೀರಾತು

ಆತ್ಮ ಯೋಜನೆ ಬಂಟ್ವಾಳದ ಬಿಟಿಎಂ ಸ್ನೇಹಾ ಕಾರ್ಯಕ್ರಮ ನಿರೂಪಿಸಿದರು. ಎಟಿಎಂ ಚಂದ್ರಕಲಾ ಸ್ವಾಗತಿಸಿ, ವಿಟ್ಲ ವಿಭಾಗದ ಎಟಿಎಂ ವಿರೂಪಾಕ್ಷಿ ಹಡಪದ ವಂದಿಸಿದರು. ಬಂಟ್ವಾಳ ತಾಲೂಕಿನ ಕೃಷಿ ಪರಿಕರ ಮಾರಾಟಗಾರರು, ಕೃಷಿ ಸಖಿಯರು, ಗ್ರಾಮ ಒನ್‌ ಹಾಗೂ ಸಿಎಸ್‌ಸಿ ಕೇಂದ್ರದ ಸಿಬ್ಬಂದಿ ಮತ್ತು ರೈತ ಬಾಂಧವರು ಪಾಲ್ಗೊಂಡು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts