ಬಂಟ್ವಾಳ

ಮಾಜಿ ಶಾಸಕ, ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ. ಪದ್ಮನಾಭ ಕೊಟ್ಟಾರಿ ಅವರಿಗೆ ರಾಜ್ಯ ಸಹಕಾರರತ್ನ ಪ್ರಶಸ್ತಿ

| 14ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಅವರಿಂದ ಪ್ರಶಸ್ತಿ ಸ್ವೀಕಾರ

ಬಂಟ್ವಾಳ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ವತಿಯಿಂದ ನೀಡಲಾಗುವ ಪ್ರತಿಷ್ಠಿತ ರಾಜ್ಯ ಸಹಕಾರ ರತ್ನ ಪ್ರಶಸ್ತಿಗೆ ಮಾಜಿ ಶಾಸಕ ಹಾಗೂ ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ. ಪದ್ಮನಾಭ ಕೊಟ್ಟಾರಿ ಅವರು ಆಯ್ಕೆಯಾಗಿದ್ದಾರೆ.

ಸಹಕಾರ ಕ್ಷೇತ್ರದಲ್ಲಿ ಪದ್ಮನಾಭ ಕೊಟ್ಟಾರಿ ಸಾಧನೆ:

ಜಾಹೀರಾತು

೧೯೭೭-೧೯೭೮ ರಲ್ಲಿ ಪಾಣೆಮಂಗಳೂರು ರೈತರ ಸೇವಾ ಸಹಕಾರ ಸಂಘದ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದು  ಪ್ರಥಮ ಬಾರಿಗೆ ಸಂಘದ ಅಧ್ಯಕ್ಷನಾಗಿ ಸತತ ೧೩ ವರ್ಷಗಳ  ಕಾರ್ಯನಿರ್ವಹಿಸಿದ್ದಾರೆ. ನಂತರ ದ ೧೩ ವರ್ಷಗಳ ಕಾಲ ಅಂದರೆ ೨೦೦೪ರ ವರೆಗೆ  ಸಂಘದ ನಿರ್ದೇಶಕನಾಗಿ  ಸಂಘದ ಸೇವೆ ಸಲ್ಲಿಸಿದ್ದಾರೆ. ಸಂಘದ ಅಭಿವೃದ್ದಿಗೆ, ಸದಸ್ಯರ ಮತ್ತು ಸಾರ್ವಜನಿಕರ ಸಮಸ್ಯೆಗಳಿಗೆ ನಿರಂತರ ಸ್ಪಂದಿಸಿ ಸಂಘವನ್ನು ಉತ್ತಮ ಸಂಘವೆಂದು ಶ್ರಮಿಸಿದ್ದಾರೆ.

  ೧೯೮೫-೮೬ ರಲ್ಲಿ ಗೋಳ್ತಮಜಲು ಗ್ರಾಮದ ಕಲ್ಲಡ್ಕದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಸ್ಥಾಪಿಸಿ ಸಂಘಕ್ಕೆ ಸ್ವಂತ ಜಾಗ, ಸ್ವಂತ ಕಟ್ಟಡ ಹಾಗೂ ಸಂಘದಲ್ಲಿ ಬಿ ಎಂ ಸಿ ಆಳವಡಿಸಿಕೊಂಡು ದಿನವಹಿ ಸುಮಾರು ೧೫೦೦ ಲೀ ಹಾಲು ಸಂಗ್ರಹಣೆ ಆಗುತ್ತದೆ.  ಈಗಲೂ ಸಂಘದ ಅಧ್ಯಕ್ಷನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕೃಷಿ ಅಭಿವೃದ್ದಿ ಸಹಕಾರಿ ಸಂಘ (ಸ್ಕ್ಯಾಡ್ಸ್)ದಲ್ಲಿ ಐದು ವರ್ಷಗಳ ಕಾಲ ನಿರ್ದೇಶಕನಾಗಿ ಉಪಾಧ್ಯಕ್ಷನಾಗಿ  ಸೇವೆ ಸಲ್ಲಿಸಿದ್ದಾರೆ.

೨೦೦೪ರಲ್ಲಿ  ರಾಜ್ಯ ವಿಧಾನಸಭಾ  ಚುನಾವಣೆ ಬಂದಾಗ ವಿಟ್ಲ ವಿಧಾನಸಭಾ ಕ್ಷೇತ್ರದಿಂz ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ದೊರೆಯಿತು. ಚುನಾವಣೆಯಲ್ಲಿ  ಗೆದ್ದು ಶಾಸಕನಾಗಿ ಕ್ಷೇತ್ರದ ಅಭಿವೃದ್ದಿ ಹಾಗೂ ಜನಸಾಮಾನ್ಯರ ಕೆಲಸ ಕಾರ್ಯಗಳಿಗೆ ಯಾವುದೇ ಜಾತಿ ಧರ್ಮ, ಪಕ್ಷ ನೋಡದೇ ನಿರಂತರ ಸ್ಪಂದಿಸಿದ್ದಾರೆ.

 ಪಾಣೆಮಂಗಳೂರು ರೈತರ ಸೇವಾ ಸಹಕಾರ ಸಂಘದಿಂದ ೨೦೧೪ರಲ್ಲಿ ವಿಭಜನೆಗೊಂಡು ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘವು ೦೨-೦೪-೨೦೧೪ ರಲ್ಲಿ ಅಸ್ತಿತ್ವಕ್ಕೆ ಬಂದು   ಸಂಘದ ಅಧ್ಯಕ್ಷನಾಗಿ ನಿರಂತರ ಪ್ರಗತಿ ಪಥದಲ್ಲಿ ಮುನ್ನಡೆಸಿ  ಸಂಘವನ್ನು ಅಭಿವೃದ್ದಿ ಪಥದಲ್ಲಿ  ಸಾಗಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ.

 ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘವು ೨೦೧೫ ರಿಂದ ೨೦೨೬ ವರೆಗೆ ಉತ್ತಮ ಸಹಕಾರಿ ಸಂಘವೆಂದು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ವಾರ್ಷಿಕ ಮಹಾಸಭೆಯಲ್ಲಿ ಗೌರವಕ್ಕೆ ಪಾತ್ರವಾಗಿದೆ.  ಸಹಕಾರಿ ಕ್ಷೇತ್ರದಲ್ಲಿ ನಿರಂತರ ೪೮ ವರ್ಷಗಳ ಸುದೀರ್ಘ ಹಾಗೂ ಅವಿರತ ಸೇವೆಯನ್ನು ಕೊಟ್ಟಾರಿ ಅವರು ಸಲ್ಲಿಸಿದ್ದಾರೆ.

ಮಾಜಿ ಶಾಸಕರಾಗಿರುವ ಅವರು ಸಾರ್ವಜನಿಕ ಜೀವನದ ಅನುಭವದೊಂದಿಗೆ ಸಹಕಾರ ಕ್ಷೇತ್ರದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ರೈತರು, ಹೈನುಗಾರರು ಹಾಗೂ ಗ್ರಾಮೀಣ ಭಾಗದ ಜನರ ಆರ್ಥಿಕ ಚಟುವಟಿಕೆಗಳಿಗೆ ಸಹಕಾರಿ ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದ್ದು, ಈ ಕ್ಷೇತ್ರದಲ್ಲಿ ಅವರ ಸೇವೆಯನ್ನು ಗುರುತಿಸಿ ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ನ. 14ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅವರಿಂದ ಕೆ. ಪದ್ಮನಾಭ ಕೊಟ್ಟಾರಿ ಅವರು ರಾಜ್ಯ ಸಹಕಾರಿ ರತ್ನ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.