ವೀರಕಂಭ ಮಜಿ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮ

ಮಕ್ಕಳಿಗೆ ಸ್ವತಂತ್ರವಾಗಿ ಯೋಚಿಸಲು, ಹೊಸ ವಿಷಯಗಳನ್ನು ಕಲಿಯಲು ಹಾಗೂ ತಮ್ಮ ಆಸಕ್ತಿಯ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಮುಕ್ತ ಅವಕಾಶ ನೀಡಬೇಕು ಎಂದು ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷೆ ಡಾ. ಗಾಯತ್ರಿ ಇ. ಪ್ರಕಾಶ್ ಹೇಳಿದರು.

ವೀರಕಂಭದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ಕಲ್ಲಡ್ಕ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ – 2026 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಂಟ್ವಾಳ ಯುವವಾಹಿನಿ ಅಧ್ಯಕ್ಷ ಕಿರಣ್ ಮಾತನಾಡಿ, ಮಕ್ಕಳ ಪ್ರತಿಭೆಯನ್ನು ಮೊದಲು ಗುರುತಿಸುವವರು ತಂದೆ-ತಾಯಿ ಹಾಗೂ ಶಿಕ್ಷಕರು. ಪೋಷಕರು ತಮ್ಮ ಆಸೆ, ಕನಸುಗಳನ್ನು ಮಕ್ಕಳ ಮೇಲೆ ಬಲವಂತವಾಗಿ ಹೇರಬಾರದು. ಇತರ ಮಕ್ಕಳೊಂದಿಗೆ ಹೋಲಿಕೆ ಮಾಡುವುದರಿಂದ ಅವರ ಆತ್ಮವಿಶ್ವಾಸ ಕುಗ್ಗುತ್ತದೆ. ಬದಲಾಗಿ, ಅವರ ಸಣ್ಣ ಸಾಧನೆಯನ್ನೂ ಮೆಚ್ಚಿ ಮುಂದಿನ ಸಾಧನೆಗೆ ಪ್ರೇರಣೆ ನೀಡಬೇಕು. ತಪ್ಪು ಮಾಡಿದಾಗ ಬೈಯುವ ಬದಲು ತಿದ್ದಿ ಮಾರ್ಗದರ್ಶನ ನೀಡಬೇಕು ಎಂದು ಸಲಹೆ ನೀಡಿದರು.

ಜಾಹೀರಾತು

ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೊರಗಪ್ಪ ನಾಯ್ಕ ವಹಿಸಿದ್ದರು. ಕೆಲಿಂಜ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮೋಹಿತ್ ಶೆಟ್ಟಿ ಮಾತನಾಡಿ, “ಕೆಲಿಂಜ ಶಾಲೆಯಲ್ಲಿ ಪ್ರತಿಭಾ ಕಾರಂಜಿಯನ್ನು ವಿಜೃಂಭಣೆಯಿಂದ ನಡೆಸುವ ಕನಸಿತ್ತು. ಆದರೆ, ದುರದೃಷ್ಟವಶಾತ್ ನಮ್ಮ ಮುಖ್ಯ ಶಿಕ್ಷಕಿಯವರನ್ನು ಕಳೆದುಕೊಂಡ ನೋವಿನಲ್ಲಿದ್ದಾಗ, ಮಜಿ ಶಾಲೆಯವರು ಆ ಜವಾಬ್ದಾರಿಯನ್ನು ವಹಿಸಿಕೊಂಡು ದಿವಂಗತ ಮುಖ್ಯ ಶಿಕ್ಷಕಿಯ ಗೌರವಾರ್ಥ ಅತ್ಯಂತ ಅಚ್ಚುಕಟ್ಟಾಗಿ ಕಾರ್ಯಕ್ರಮ ಸಂಘಟಿಸಿರುವುದು ಅಭಿನಂದನೀಯ,” ಎಂದರು.

Bhadra Home Appliances

ವೀರಕಂಭ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ದಿನೇಶ್, ಪಿಡಿಒ ಶಂಭು ಕುಮಾರ್ ಶರ್ಮ, ಪಂಚಾಯತ್ ನಿಕಟಪೂರ್ವ ಉಪಾಧ್ಯಕ್ಷ ಜನಾರ್ಧನ ಪೂಜಾರಿ, ಕೆಲಿಂಜ ಶಾಲಾ ನಿಕಟಪೂರ್ವ ಅಧ್ಯಕ್ಷ ಹಮೀದ್, ಬಂಟ್ವಾಳ ತಾಲೂಕು ಪಿಡಬ್ಲ್ಯೂಡಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಶೈಲೇಶ್ ಪೂಜಾರಿ ಕುರ್ಚಿಗುಡ್ಡೆ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಕೋಡಿ ಈಶ್ವರ ಭಟ್, ಸುಕುಮಾರ್ ಬಂಟ್ವಾಳ, ಎಸ್‌ಡಿಎಂಸಿ ಉಪಾಧ್ಯಕ್ಷೆ ಗಾಯತ್ರಿ, ಶಾಲಾ ನಾಯಕ ಮಹಮ್ಮದ್ ಹಾರೂನ್ ಫರ್ಹಾನ್ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಆಶಾ ನಾಯಕ್, ಬಿಐಆರ್‌ಟಿ ಸುರೇಖಾ ಯಳವರ, ಸಮೂಹ ಸಂಪನ್ಮೂಲ ವ್ಯಕ್ತಿ ಪ್ರತಿಮಾ ವೈ.ವಿ, ಪ್ರಭಾರ ಸಮನ್ವಯಾಧಿಕಾರಿ ವಿದ್ಯಾ ಭೇಟಿ ನೀಡಿದರು.

ಗಮನ ಸೆಳೆದ ಪರಿಸರ ಜಾಗೃತಿ, ಮಿನಿ ಲೈಬ್ರರಿ: ಉದ್ಘಾಟನಾ ಸಮಾರಂಭದ ಬಳಿಕ ಕಿರಿಯರ ಹಾಗೂ ಹಿರಿಯರ ವಿಭಾಗದಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳ ಸುಮಾರು 300 ವಿದ್ಯಾರ್ಥಿಗಳು ಪಾಲ್ಗೊಂಡರು. ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಲು ನಿರ್ಮಿಸಲಾಗಿದ್ದ ಆಕರ್ಷಕ ‘ಸೆಲ್ಫಿ ಕಾರ್ನರ್’ ಹಾಗೂ ಓದುವ ಹವ್ಯಾಸ ಪ್ರೋತ್ಸಾಹಿಸಲು ಶಾಲಾ ಆವರಣದಲ್ಲಿ ನಿಲ್ಲಿಸಲಾಗಿದ್ದ ‘ಮಿನಿ ಲೈಬ್ರರಿ ರಿಕ್ಷಾ’ ವಿಶೇಷ ಗಮನ ಸೆಳೆಯಿತು.

ಮುಖ್ಯ ಶಿಕ್ಷಕಿ ಬೆನೆಡಿಕ್ಟಾ ಆಗ್ನೇಸ್ ಮಂಡೋನ್ಸಾ ಸ್ವಾಗತಿಸಿದರು. ಸಮೂಹ ಸಂಪನ್ಮೂಲ ವ್ಯಕ್ತಿ ಜ್ಯೋತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ದೈಹಿಕ ಶಿಕ್ಷಕ ಇಂದುಶೇಖರ್ ವಂದಿಸಿದರು. ಶಿಕ್ಷಕ ತೌಸೀಫ್ ಅಹ್ಮದ್ ಹಾಗೂ ಹಿರಿಯ ಶಿಕ್ಷಕಿ ಸಂಗೀತ ಶರ್ಮ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ವೀರಕಂಭ ಮಜಿ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*