ನ. 15ರಂದು ಯುವವಾಹಿನಿ ಸಂಸ್ಥೆಯ ನೂತನ ಆಡಳಿತ ಕಚೇರಿ ಉದ್ಘಾಟನೆ

ನ. 15ರಂದು ಯುವವಾಹಿನಿ ಸಂಸ್ಥೆಯ ನೂತನ ಆಡಳಿತ ಕಚೇರಿ ಉದ್ಘಾಟನೆ

ಸರಕಾರದಿಂದ ಮಂಜೂರಾದ ಸ್ವಂತ ನಿವೇಶನದಲ್ಲಿ ಸಂಸ್ಥೆಯ ಬಹುದಿನಗಳ ಕನಸು ನನಸು

ಮಂಗಳೂರು: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಬಹುದಿನಗಳ ಕನಸಾದ ನೂತನ ಆಡಳಿತ ಕಚೇರಿಯ ಉದ್ಘಾಟನಾ ಸಮಾರಂಭವು ನವೆಂಬರ್ 15ರಂದು ಭಾನುವಾರ ಬೆಳಿಗ್ಗೆ 9.30ಕ್ಕೆ ಮಂಗಳೂರಿನ ವಿದ್ಯಾನಗರ, ಪಂಜಿಮೊಗರು ಪ್ರದೇಶದಲ್ಲಿ ಯುವವಾಹಿನಿ ಸಂಸ್ಥೆಗೆ ಸರಕಾರದಿಂದ ಮಂಜೂರಾದ ಸ್ವಂತ ನಿವೇಶನದಲ್ಲಿ ನಡೆಯಲಿದೆ.

ಜಾಹೀರಾತು

ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಅವರು ನೂತನ ಆಡಳಿತ ಕಚೇರಿಯನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಅವರು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷರಾದ ಜೈರಾಜ್ ಹೆಚ್. ಸೋಮಸುಂದರಂ ಅವರು ಗುರುಸಾನಿಧ್ಯದಲ್ಲಿ ದೀಪ ಪ್ರಜ್ವಲನೆ ನೆರವೇರಿಸಲಿದ್ದಾರೆ.

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಾಜಿ ಸಚಿವರಾದ ವಿ. ಸುನಿಲ್ ಕುಮಾರ್, ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಉಮಾನಾಥ ಎ. ಕೋಟ್ಯಾನ್, ಮೆಸ್ಕಾಂ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ ಹಾಗೂ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಸೂರ್ಯಕಾಂತ್ ಜೆ. ಸುವರ್ಣ ಭಾಗವಹಿಸಲಿದ್ದಾರೆ.

ಗೌರವ ಉಪಸ್ಥಿತರಾಗಿ ಮಂಗಳೂರು ಮಹಾನಗರ ಪಾಲಿಕೆಯ ನಿಕಟಪೂರ್ವ ಸದಸ್ಯರಾದ ಅನಿಲ್ ಕುಮಾರ್ ಮತ್ತು ಸುಮಂಗಲಾ, ಮಾಜಿ ಸದಸ್ಯರಾದ ದೀಪಕ್ ಪೂಜಾರಿ, ವಿಕಾಸ್ ಕಾಲೇಜಿನ ಟ್ರಸ್ಟಿಯಾದ ಸೂರಜ್ ಕಲ್ಯಾ, ಡಾ. ಕಿರಣ್ ಕುಮಾರ್, ರಮೇಶ್ ಪೂಜಾರಿ ಚೆಲ್ಯಾರ್, ವಿದ್ಯಾನಗರ ಶ್ರೀ ಕೃಷ್ಣ ಭಜನಾ ಮಂದಿರದ ಅಧ್ಯಕ್ಷರಾದ ಸುನೀಲ್ ಭಂಡಾರಿ, ಯುವವಾಹಿನಿ ಗೌರವ ಸಲಹೆಗಾರರಾದ ಟಿ.ಎನ್. ಪೂಜಾರಿ ಹಾಗೂ ಡಾ. ಎನ್.ಟಿ. ಅಂಚನ್ ಸೇರಿದಂತೆ ಸಮಾಜದ ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿರುವರು.

1987ರ ಅಕ್ಟೋಬರ್ 2ರಂದು ಸ್ಥಾಪನೆಯಾದ ಯುವವಾಹಿನಿ ಸಂಸ್ಥೆಯು ಕಳೆದ ನಾಲ್ಕು ದಶಕಗಳಿಂದ ‘ವಿದ್ಯೆ, ಉದ್ಯೋಗ, ಸಂಪರ್ಕ’ ಎಂಬ ಧ್ಯೇಯವಾಕ್ಯದೊಂದಿಗೆ ಶಿಕ್ಷಣ, ಉದ್ಯೋಗ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಮಹತ್ವದ ಸೇವೆ ಸಲ್ಲಿಸುತ್ತಾ ಬಂದಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಬೆಂಗಳೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ 35 ಘಟಕಗಳ ಮೂಲಕ ಐದು ಸಾವಿರಕ್ಕೂ ಅಧಿಕ ಸದಸ್ಯರನ್ನು ಹೊಂದಿರುವ ಸಂಸ್ಥೆಯ ಚಟುವಟಿಕೆಗಳಿಗೆ ನೂತನ ಆಡಳಿತ ಕಚೇರಿಯು ಶಾಶ್ವತ ಕೇಂದ್ರವಾಗಿ ರೂಪುಗೊಳ್ಳಲಿದೆ.

ಸಂಸ್ಥೆಯ ಆಡಳಿತಾತ್ಮಕ ಕಾರ್ಯಚಟುವಟಿಕೆಗಳಿಗೆ ವ್ಯವಸ್ಥಿತ ವೇದಿಕೆಯನ್ನು ಒದಗಿಸುವುದರ ಜೊತೆಗೆ ಮುಂದಿನ ಪೀಳಿಗೆಯ ಯುವಜನರ ಸಂಘಟನಾ ಶಕ್ತಿ, ಸಾಮಾಜಿಕ ಬದ್ಧತೆ ಹಾಗೂ ಸೇವಾ ಮನೋಭಾವವನ್ನು ಮತ್ತಷ್ಟು ಬಲಪಡಿಸುವ ಮಹತ್ತರ ಆಶಯ ಈ ನೂತನ ಕಚೇರಿಯ ನಿರ್ಮಾಣದ ಹಿಂದಿದೆ. ಸಂಸ್ಥೆಯ ಬೆಳವಣಿಗೆಯ ಪಯಣದಲ್ಲಿ ಇದೊಂದು ಮಹತ್ವದ ಮೈಲಿಗಲ್ಲಾಗಲಿದೆ.

ಈ ಮಹತ್ವದ ಯೋಜನೆ ಸಾಕಾರಗೊಳ್ಳಲು ಸಹಕರಿಸಿದ ದಾನಿಗಳು, ಸಮಾಜದ ಬಂಧುಗಳು, ಕೇಂದ್ರ ಸಮಿತಿ ಹಾಗೂ ಕಟ್ಟಡ ಸಮಿತಿಯ ಪದಾಧಿಕಾರಿಗಳು, ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರ ಸಹಕಾರವನ್ನು ಸಂಸ್ಥೆಯು ಕೃತಜ್ಞತೆಯಿಂದ ಸ್ಮರಿಸುತ್ತದೆ.

ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಸಮಾಜದ ಗಣ್ಯರು, ಯುವವಾಹಿನಿಯ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು, ಎಲ್ಲಾ ಘಟಕಗಳ ಸದಸ್ಯರು, ಹಿತೈಷಿಗಳು ಹಾಗೂ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೇಂದ್ರ ಸಮಿತಿಯು ಆತ್ಮೀಯವಾಗಿ ಆಹ್ವಾನಿಸಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಹಾಗೂ ಯುವವಾಹಿನಿ ಕಟ್ಟಡ ಸಮಿತಿಯ ಸಂಚಾಲಕರಾದ ಹರೀಶ್ ಕೆ. ಪೂಜಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ನ. 15ರಂದು ಯುವವಾಹಿನಿ ಸಂಸ್ಥೆಯ ನೂತನ ಆಡಳಿತ ಕಚೇರಿ ಉದ್ಘಾಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*