ಬಂಟ್ವಾಳ

ಪ್ರತಿಭಟನೆಗೆ ಮುನ್ನ ಗ್ಯಾರಂಟಿ ಲಾಭ ಕುರಿತು ಮನೆಯವರನ್ನು ಪ್ರಶ್ನಿಸಲಿ: ಬಿಜೆಪಿಗೆ ಸವಾಲೆಸೆದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ

ಬಂಟ್ವಾಳ: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಹಾಸ್ಯ ಮಾಡುವ ಬಿಜೆಪಿಯವರು ಮೊದಲು ತಮ್ಮ ಮನೆಯ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ರೂ. 2,000 ಹಣ ಬಂದಿದೆಯೇ, ಆ ಹಣದಿಂದ ಮನೆಯ ಖರ್ಚಿಗೆ, ಮಕ್ಕಳ ವಿದ್ಯಾಭ್ಯಾಸಕ್ಕೆ ಮತ್ತು ಔಷಧೋಪಚಾರಕ್ಕೆ ನೆರವಾಗಿದೆಯೇ ಎಂದು ವಿಚಾರಿಸಲಿ ಎಂದು ಬಂಟ್ವಾಳ ತಾಲೂಕು ಪಂಚಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ. ಪೂಜಾರಿ ಹೇಳಿದ್ದಾರೆ.

 ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗ್ಯಾರಂಟಿ ಯೋಜನೆಗಳು ಬೇಡ ಎಂದು ಬಹಿರಂಗವಾಗಿ ಹೇಳುವ ಧೈರ್ಯ ತೋರಿಸಲಿ ಎಂದು ಬಿಜೆಪಿಯವರಿಗೆ ಸವಾಲು ಹಾಕಿದರು.

ಗ್ರಾಮಗಳಲ್ಲಿ ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ಪ್ರತಿಭಟನೆ ಜನರ ಸಮಸ್ಯೆಗಳಿಗಾಗಿಯೋ ಅಥವಾ ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿಯೋ ಎಂಬುದನ್ನು ಬಿಜೆಪಿ ನಾಯಕರು ಮೊದಲು ಸ್ಪಷ್ಟಪಡಿಸಬೇಕಾಗಿದೆ ತಮ್ಮ ಆಡಳಿತದ ಸಾಧನೆಗಳನ್ನು ಜನರ ಮುಂದೆ ಹೇಳಿಕೊಳ್ಳಲು ಯಾವುದೇ ಸಮರ್ಥ ವಿಚಾರಗಳಿಲ್ಲದ ಕಾರಣ, ರಾಜ್ಯ ಸರ್ಕಾರದ ಜನಪರ ಯೋಜನೆಗಳ ವಿರುದ್ಧ ಅಪಪ್ರಚಾರ ಮಾಡುವ ಮೂಲಕ ರಾಜಕೀಯ ಲಾಭ ಪಡೆಯಲು ಬಿಜೆಪಿ ಯತ್ನಿಸುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಟೀಕಿಸಿದರು.

ಜಾಹೀರಾತು
VNR GOLD

ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಮತ್ತು ಅನುದಾನ ಬಿಡುಗಡೆಯಾಗುತ್ತಿಲ್ಲ ಎಂಬ ಬಿಜೆಪಿಯ ಆರೋಪ ಸತ್ಯಕ್ಕೆ ದೂರವಾಗಿದೆ. ಬಡವರು, ಮಹಿಳೆಯರು, ಯುವಕರು ಮತ್ತು ಸಾಮಾನ್ಯ ಕುಟುಂಬಗಳ ಆರ್ಥಿಕ ಬದುಕಿಗೆ ಈ ಯೋಜನೆಗಳು ಆಸರೆಯಾಗಿವೆ. ಜನರ ಕೈಗೆ ಹಣ ತಲುಪಿಸುವುದು, ಮಹಿಳೆಯರಿಗೆ ಸ್ವಾವಲಂಬನೆ ನೀಡುವುದು, ಹಸಿವು ನೀಗಿಸುವುದು ಹಾಗೂ ವಿದ್ಯುತ್ ವೆಚ್ಚದ ಹೊರೆಯನ್ನು ಕಡಿಮೆ ಮಾಡುವುದು ಕೂಡ ಅಭಿವೃದ್ಧಿಯ ಭಾಗವೇ ಹೊರತು ಅಭಿವೃದ್ಧಿಗೆ ವಿರುದ್ಧವಾದುದಲ್ಲ. ಸರ್ಕಾರ ಗ್ಯಾರಂಟಿ ಯೋಜನೆಗಳ ಜೊತೆಗೆ ರಸ್ತೆ, ಕುಡಿಯುವ ನೀರು, ಶಾಲೆ, ಆಸ್ಪತ್ರೆ, ಸೇತುವೆ ಹಾಗೂ ಗ್ರಾಮೀಣ ಮೂಲಸೌಕರ್ಯಗಳ ಅಭಿವೃದ್ಧಿಗೂ ಸಮರ್ಪಕ ಅನುದಾನ ನೀಡುತ್ತಿದೆ ಎಂದು ಅವರು ವಿವರಿಸಿದರು.ಸರ್ಕಾರದ ಹಣಕಾಸಿನ ಬಗ್ಗೆ ಪ್ರಶ್ನೆಗಳಿದ್ದರೆ ದಾಖಲೆಗಳೊಂದಿಗೆ ಚರ್ಚಿಸಲಿ, ಕೇವಲ ಆರೋಪ ಮಾಡುವುದರಿಂದ ಸತ್ಯ ಬದಲಾಗುವುದಿಲ್ಲ ಎಂದು ಜಯಂತಿ ವಿ. ಪೂಜಾರಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಪಂಚಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಚಂದ್ರಶೇಖರ ಆಚಾರ್ಯ ರಾಯಿ, ಸತೀಶ್ ನಾವರ, ಕೃಷ್ಣಪ್ಪ ಪೂಜಾರಿ ಹಾಗೂ ಕರೀಂ ಬೊಳ್ಳಾಯಿ ಉಪಸ್ಥಿತರಿದ್ದರು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.