ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಟುಂಬ ಸಹಮಿಲನ

ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಬಂಟ್ವಾಳ ನೇತ್ರಾವತಿ ಸಂಗಮ  ಘಟಕದಿಂದ ದೀಪಾವಳಿ ಕುಟುಂಬ ಸಹಮಿಲನ ಮತ್ತು ಜಿಲ್ಲಾ  ರಾಜ್ಯೋತ್ಸವ  ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಕಾರ್ಯಕ್ರಮ ಬಿಸಿರೋಡಿನ ಅಕ್ಷಯ ಸೌಧದಲ್ಲಿ ಜರಗಿತು.

ರಾಷ್ಟ್ರೀಯ ಉಪಾಧ್ಯಕ್ಷರಾದ‌ ಅಕ್ಷತಾ ಮುಖ್ಯ ಅತಿಥಿಯಾಗಿ ಮಾತನಾಡಿದರು. ಬಂಟ್ವಾಳ ಘಟಕವು ಉತ್ತಮ ಸೇವಾ ಕಾರ್ಯಗಳನ್ನು ಮಾಡುತ್ತಿದೆ .ಮಾಜಿ ಅಧ್ಯಕ್ಷ ರಾದ ಡಾ.ಆನಂದ ಬಂಜನ್ ಮತ್ತು ಸೀನಿಯರ್ ಆದಿರಾಜ ಜೈನ್ ಇವರಿಗೆ ಪಿಪಿಎಫ್ ಪರಸ್ಕಾರ ನೀಡಿ ಗೌರವಿಸಲಾಗುವುದು ಎಂದರು.

ದೀಪಾವಳಿ‌ ಹಬ್ಬದ ‌ ಆಚರಣೆಯ ಐತಿಹಾಸಿಕ ಹಿನ್ನೆಲೆ ಮತ್ತು ವಿಶ್ವಯಾಪಿಯಾಗಿ  ಆಚರಿಸಲ್ಪಡುವ ಬೆಳಕಿನ ಹಬ್ಬದ ವಿಶೇಷತೆಯನ್ನು ಬಂಟ್ವಾಳ ತಾಲೂಕು ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ  ನ್ಯಾಯವಾದಿ ರವೀಂದ್ರ ಕುಕ್ಕಾಜೆ ತಿಳಿಸಿದರು.

ಜಾಹೀರಾತು
VNR GOLD

ಈ ಸಂದರ್ಭ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು  ವರ್ತಕರ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ  ಸುಭಾಶ್ಚಂದ್ರ ಜೈನ್ ,ಹಿರಿಯ ರಾಜಕಾರಣಿ  ಸಾಮಾಜಿಕ ಕಾರ್ಯಕರ್ತ ಪಿ.ಎ.ರಹೀಂ ಮತ್ತು   ಝೀ ಕನ್ನಡ ನ್ಯೂಸ್  ಕರ್ನಾಟಕ ಐಡಲ್ 2026 ಪ್ರಶಸ್ತಿ ಪುರಸ್ಕೃತ ಸದಾನಂದ ಬಂಗೇರ  ಇವರನ್ನು‌ಅಭಿನಂದಿಸಿ ಸನ್ಮಾನಿಸಲಾಯಿತು.

ಲೀಜನ್‌ ಅಧ್ಯಕ್ಷ ತೇವು ತಾರಾ ನಾಥ ಕೊಟ್ಟಾರಿ ಅಧ್ಯಕ್ಷತೆ ವಹಿಸಿ ಎಲ್ಲರನ್ನೂ ಅಭಿನಂದಿಸಿದರು. ಸ್ಥಾಪಕ ಅಧ್ಯಕ್ಷ ಜಯಾನಂದ ಪೆರಾಜೆ, ಕೋಶಾಧಿಕಾರಿ ಮೊಹಮ್ಮದ್ , ಸಹಕಾರ್ಯದರ್ಶಿ ಸನ್ಮತಿ ಇಂದ್ರ ,ಸದಸ್ಯರಾದ ದೇವಪ್ಪ ಕುಲಾಲ್,ಕರುಣೇಂದ್ರ ಪೂಜಾರಿ, ಶಿಕ್ಷಕ ರಾಮಕೃಷ್ಣ ರಾವ್, ಯೋಗೀಶ್ ಬಂಗೇರ,ಹರಿಶ್ಚಂದ್ರ ಆಳ್ವ, ರಾಜಾರಾಮ ಐತಾಳ್, ಗಿರಿಧರ ಗೌಡ,ಮೋಹನದಾಸ್ ಕೊಟ್ಟಾರಿ,ಪ್ರಮೀಳಾ ಮಾಣೂರು, ಸುಜಾತ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಕ ಜಯಗಣೇಶ ನಿರೂಪಿಸಿ, ಕಾರ್ಯದರ್ಶಿ ರೇಖಾ ರಾವ್  ವಂದಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಟುಂಬ ಸಹಮಿಲನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*