ಬಂಟ್ವಾಳ

ರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್‌ನಲ್ಲಿ ಕಲ್ಲಡ್ಕ ಶ್ರೀರಾಮ ಪಿಯು ಕಾಲೇಜು ವಿದ್ಯಾರ್ಥಿನಿ ಅನರ್ಘ್ಯ ಎ.ಆರ್.ಗೆ ಚಿನ್ನದ ಪದಕ

ಪುತ್ತೂರು ಬಾಲವನ ಈಜುಕೊಳದಲ್ಲಿ ನಡೆದ 37ನೇ ರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್‌ನಲ್ಲಿ ಕಲ್ಲಡ್ಕ ಶ್ರೀರಾಮ ಪಿಯು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಅನರ್ಘ್ಯ ಎ.ಆರ್. ಅವರು 1 ಚಿನ್ನ ಹಾಗೂ 2 ಬೆಳ್ಳಿ ಪದಕಗಳನ್ನು ಗೆಲ್ಲುವ ಮೂಲಕ ರಾಷ್ಟ್ರಮಟ್ಟದ ಮುಂದಿನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಮತ್ತು ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಈ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. 19 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಸ್ಪರ್ಧಿಸಿದ್ದ ಅನರ್ಘ್ಯ, 200 ಮೀಟರ್ ಇಂಡಿವಿಜುವಲ್ ಮೆಡ್ಲೆಯಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ. ಅಲ್ಲದೆ, 200 ಮೀಟರ್ ಬ್ಯಾಕ್‌ಸ್ಟ್ರೋಕ್ ಮತ್ತು 400 ಮೀಟರ್ ಫ್ರೀಸ್ಟೈಲ್ ವಿಭಾಗಗಳಲ್ಲಿ ತಲಾ ಒಂದು ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ. ಈ ಅಮೋಘ ಸಾಧನೆಯೊಂದಿಗೆ ಅವರು ಗೋವಾದಲ್ಲಿ ನಡೆಯಲಿರುವ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ಈಜು ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ. ಇವರು ರೇಷ್ಮೆ ಇಲಾಖೆಯ ನಿವೃತ್ತ ಇನ್‌ಸ್ಪೆಕ್ಟರ್ ಬಿ.ಕೆ. ನಾಯ್ಕ್, ಉಮೇಶ್ ವಿಟ್ಲ ಮತ್ತು ಅಶೋಕ್ ದೇವಾಡಿಗ ಅವರ ಶಿಷ್ಯೆಯಾಗಿದ್ದಾರೆ. ಪ್ರಸ್ತುತ ಮಂಗಳೂರಿನ ಸಂತ ಅಲೋಶಿಯಸ್ ಈಜುಕೊಳದ ಮುಖ್ಯ ತರಬೇತುದಾರ ಲೋಕರಾಜ್ ವಿಟ್ಲ ಹಾಗೂ ತರಬೇತುದಾರರಾದ ಸಂಜಯ್ ಮತ್ತು ಗಗನ್ ಅವರಿಂದ ವಿಶೇಷ ತರಬೇತಿ ಪಡೆಯುತ್ತಿದ್ದಾರೆ. ಇವರು ಅಶೋಕ್ ಕುಮಾರ್ ಬರಿಮಾರು ಮತ್ತು ರೋಹಿಣಿ ಬಿ. ದಂಪತಿಯ ಪುತ್ರಿ.

VNR GOLD
ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.