ಡಿ. 12ರಂದು ಬಂಟ್ವಾಳದಲ್ಲಿ ರಾಷ್ಟ್ರೀಯ ಲೋಕ ಅದಾಲತ್; ರಾಜಿ ಸಂಧಾನದ ಮೂಲಕ ಶೀಘ್ರ ನ್ಯಾಯಕ್ಕೆ ಅವಕಾಶ

BANTWALNEWS

ಬಂಟ್ವಾಳ: ನ್ಯಾಯಾಲಯಗಳಲ್ಲಿ ಬಾಕಿ ಇರುವ ರಾಜಿಯಾಗಬಹುದಾದ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳನ್ನು ಪರಸ್ಪರ ಸಂಧಾನದ ಮೂಲಕ ಇತ್ಯರ್ಥಪಡಿಸುವ ಉದ್ದೇಶದಿಂದ ಇದೇ ಡಿ. 12ರಂದು ಬಂಟ್ವಾಳ ನ್ಯಾಯಾಲಯ ಸಂಕೀರ್ಣದಲ್ಲಿ ‘ರಾಷ್ಟ್ರೀಯ ಲೋಕ ಅದಾಲತ್’ ಆಯೋಜಿಸಲಾಗಿದೆ ಎಂದು ಬಂಟ್ವಾಳ ಹಿರಿಯ ಸಿವಿಲ್ ನ್ಯಾಯಾಧೀಶರಾದ ಅನಿಲ್ ಪ್ರಕಾಶ್ ಎಂ. ತಿಳಿಸಿದರು.

ರಾಷ್ಟ್ರೀಯ ಲೋಕ ಅದಾಲತ್‌ನ ಪೂರ್ವಭಾವಿಯಾಗಿ ಬಂಟ್ವಾಳದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಾಹೀರಾತು
VNR GOLD

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಶೀಘ್ರ ವಿಲೇವಾರಿಗೆ ಈ ಕ್ರಮ ಕೈಗೊಳ್ಳಲಾಗಿದೆ. ಲೋಕ ಅದಾಲತ್ ಮೂಲಕ ಪ್ರಕರಣಗಳು ಇತ್ಯರ್ಥಗೊಂಡರೆ ನ್ಯಾಯಾಲಯದ ಸುದೀರ್ಘ ವಿಚಾರಣೆ, ಸಮಯ ಹಾಗೂ ಹಣದ ವ್ಯಯವಿಲ್ಲದೆ ಸುಲಭವಾಗಿ ನ್ಯಾಯ ಪಡೆಯಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹೆಚ್ಚಿನ ಸಹಕಾರ ನೀಡಿ ಅದಾಲತ್‌ನ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಯಾವೆಲ್ಲಾ ಪ್ರಕರಣಗಳಿಗೆ ಅವಕಾಶ?

ಚೆಕ್ ಅಮಾನ್ಯ (ಚೆಕ್ ಬೌನ್ಸ್), ಬ್ಯಾಂಕ್ ವ್ಯವಹಾರ, ಹಣ ವಸೂಲಾತಿ, ಮೋಟಾರು ವಾಹನ ಅಪಘಾತ ಪರಿಹಾರ, ಕಾರ್ಮಿಕ ವಿವಾದ, ಕೌಟುಂಬಿಕ ಕಲಹ, ಭೂಸ್ವಾಧೀನ, ಕಂದಾಯ ಸೇರಿದಂತೆ ವಿವಿಧ ಸಿವಿಲ್ ಹಾಗೂ ರಾಜಿ ಮಾಡಿಕೊಳ್ಳಲು ಅವಕಾಶವಿರುವ ಕ್ರಿಮಿನಲ್ ಪ್ರಕರಣಗಳನ್ನು ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ.

ಸಭೆಯಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶ ರಾಜೇಂದ್ರ ಪ್ರಸಾದ್ ಕೆ.ಎಸ್., ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಸೌಂದರ್ಯ ಎಂ. ಉಪಸ್ಥಿತರಿದ್ದರು. ತಾಲೂಕು ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಎಲ್ಲರ ಸಹಕಾರ ಕೋರಿದರು. ಬಂಟ್ವಾಳ ವ್ಯಾಪ್ತಿಯ ವಿವಿಧ ಇಲಾಖೆಗಳ ಅಧಿಕಾರಿಗಳು, ಪೊಲೀಸ್ ನಿರೀಕ್ಷಕರು, ಉಪನಿರೀಕ್ಷಕರು ಹಾಗೂ ರಾಷ್ಟ್ರೀಕೃತ ಬ್ಯಾಂಕ್ ಮತ್ತು ಸಹಕಾರಿ ಸಂಸ್ಥೆಗಳ ಶಾಖಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡು, ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥಪಡಿಸುವ ಕುರಿತು ಚರ್ಚಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಡಿ. 12ರಂದು ಬಂಟ್ವಾಳದಲ್ಲಿ ರಾಷ್ಟ್ರೀಯ ಲೋಕ ಅದಾಲತ್; ರಾಜಿ ಸಂಧಾನದ ಮೂಲಕ ಶೀಘ್ರ ನ್ಯಾಯಕ್ಕೆ ಅವಕಾಶ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*