
ಬಂಟ್ವಾಳ: ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಭಕ್ತರ ಅನುಕೂಲಕ್ಕಾಗಿ ಸುಮಾರು ರೂ.2 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಅನ್ನಛತ್ರ ಕಟ್ಟಡ ಸೋಮವಾರ ಲೋಕಾರ್ಪಣೆಗೊಂಡಿತು.

ಕ್ಷೇತ್ರಕ್ಕೆ ಆಗಮಿಸುವ ಸಾವಿರಾರು ಭಕ್ತರಿಗೆ ಊಟೋಪಚಾರ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ನಿರ್ಮಿಸಿರುವ ಈ ಕಟ್ಟಡ, ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಸೇರ್ಪಡೆ

ಆಶೀರ್ವಚನ ನೀಡಿದ ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ ಪೆರಮಹಂಸ ಸ್ವಾಮೀಜಿ ಭಕ್ತರು ಕ್ಷೇತ್ರಕ್ಕೆ ನೀಡಿದ ದೇಣಿಗೆಯು ಸದುಪಯೋಗವಾಗಿ ಅನ್ನಛತ್ರದ ರೂಪದಲ್ಲಿ ಸಾಕಾರಗೊಂಡಿದೆ ಎಂದು ಶುಭ ಹಾರೈಸಿದರು.

ದಕ್ಷಿಂಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಮಾತನಾಡಿ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಹಾಗೂ ಪರಂಪರೆಯ ಸಂರಕ್ಷಣೆಗೆ ಇಂತಹ ಕಾರ್ಯಗಳು ಪೂರಕವಾಗಿವೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮಾತನಾಡಿ, ಭಕ್ತರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವುದು ನಮ್ಮ ಆದ್ಯತೆಯಾಗಿದೆ ಎಂದರು.
ಮಾಜಿ ಸಚಿವ ಬಿ.ರಮಾನಾಥ ರೈ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಕುಲಾಲ್ ಶುಭ ಹಾರೈಸಿದರು. ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಆಡಳಿತಾಧಿಕಾರಿ ಬಂಟ್ವಾಳ ತಹಶೀಲ್ದಾರ್ ಜಿ. ಮಂಜುನಾಥ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಬುಡಾ ಅಧ್ಯಕ್ಷ ಬೇಬಿ ಕುಂದರ್, ಗ್ಯಾರಂಟಿ ಸಮಿತಿ ಅಧ್ಯಕ್ಷೆ ಜಯಂತಿ ವಿ. ಪೂಜಾರಿ, ಸಜಿಪಮಾಗಣೆ ತಂತ್ರಿ ಸುಬ್ರಹ್ಮಣ್ಯ ಭಟ್, ಕಾರ್ಯನಿರ್ವಹಣಾಧಿಕಾರಿ ದಿವಾಕರ ಮುಗುಳ್ಯ, ಉಪಸ್ಥಿತರಿದ್ದರು. ಉದ್ಯಮಿ ನಗ್ರಿಗುತ್ತು ವಿವೇಕ್ ಶೆಟ್ಟಿ ಸ್ವಾಗತಿಸಿದರು. ಶಿವಪ್ರಸಾದ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಗಿರೀಶ್ ಪೂಜಾರಿ ವಂದಿಸಿದರು. ದೈವಸ್ಥಾನದ ಅರ್ಚಕ ವೃಂದ, ಸಿಬ್ಬಂದಿ ವರ್ಗ, ಸಜೀಪ ಮಾಗಣೆ ಗುತ್ತಿನವರು ಹಾಗೂ ಊರಿನ ಹತ್ತು ಸಮಸ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


Be the first to comment on "ಪಣೋಲಿಬೈಲು ಕ್ಷೇತ್ರದಲ್ಲಿ ರೂ.2 ಕೋಟಿ ವೆಚ್ಚದ ಅನ್ನಛತ್ರ ಲೋಕಾರ್ಪಣೆ"