ಬಂಟ್ವಾಳ

ಎಲ್ಪೇಲು ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ

ಮಕ್ಕಳ ಆಟ, ಕಲಿಕೆ ಹಾಗೂ ಸರ್ವಾಂಗೀಣ ಬೆಳವಣಿಗೆಯಲ್ಲಿ ಅಂಗನವಾಡಿ ಕೇಂದ್ರಗಳು ಮಹತ್ವದ ಪಾತ್ರ ವಹಿಸುತ್ತವೆ. ಮಕ್ಕಳು ಕೇವಲ ನಾಲ್ಕು ಗೋಡೆಗಳ ಮಧ್ಯೆ ಬಂಧಿಯಾಗದೆ, ಆಟವಾಡುತ್ತಾ ಸಂತೋಷದಿಂದ ಕಲಿಯುವಂತಹ ಪೂರಕ ವಾತಾವರಣ ಅಂಗನವಾಡಿಗಳಲ್ಲಿ ನಿರ್ಮಾಣವಾಗಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.

VNR GOLD

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಪಂಚಾಯತ್, ಬಂಟ್ವಾಳ ಶಿಶು ಅಭಿವೃದ್ಧಿ ಯೋಜನೆ, ಕುಕ್ಕಿಪಾಡಿ ಗ್ರಾಮ ಪಂಚಾಯತ್ ಹಾಗೂ ಬಾಲವಿಕಾಸ ಸಮಿತಿ ಎಲ್ಪೇಲು ಅಂಗನವಾಡಿ ಕೇಂದ್ರದ ಆಶ್ರಯದಲ್ಲಿ ನಿರ್ಮಿಸಲಾದ ಎಲ್ಪೇಲು ಅಂಗನವಾಡಿ ಕೇಂದ್ರದ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಮಕ್ಕಳ ಜೀವನದಲ್ಲಿ ಅಂಗನವಾಡಿ ಹಂತ ಅತ್ಯಂತ ಮಹತ್ವದ್ದಾಗಿದೆ. ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಎಂಟು ಅಂಗನವಾಡಿಗಳ ನೂತನ ಕಟ್ಟಡ ನಿರ್ಮಾಣಕ್ಕೆ ಅನುದಾನ ಒದಗಿಸಿದ್ದು, ಕ್ಷೇತ್ರದ ಮಕ್ಕಳು ಉತ್ತಮ ಸೌಲಭ್ಯ ಹೊಂದಿರುವ ಮಾದರಿ ಅಂಗನವಾಡಿಗಳಲ್ಲಿ ಕಲಿಯಬೇಕು ಎಂಬುದು ನನ್ನ ಕನಸಾಗಿದೆ. ಎಳೆಯ ಮಕ್ಕಳು ಅಂಗನವಾಡಿಗೆ ಖುಷಿಯಿಂದ ಬರುವಂತಹ ವಾತಾವರಣ ನಿರ್ಮಿಸಬೇಕೆಂಬ ಆಶಯ ಹೊಂದಿದ್ದೇನೆ” ಎಂದರು. ಇದೇ ವೇಳೆ, ಉದ್ಯಮದ ಲಾಭದ ಒಂದು ಭಾಗವನ್ನು ಗ್ರಾಮದ ಅಭಿವೃದ್ಧಿ ಕಾರ್ಯಗಳಿಗೂ ವಿನಿಯೋಗಿಸುವಂತೆ ಸಲಹೆ ನೀಡಿದರು.

ಜಾಹೀರಾತು

ದಾನಿಗಳಿಗೆ ಸನ್ಮಾನ: ಸಮಾರಂಭದಲ್ಲಿ ಅಂಗನವಾಡಿ ಕಟ್ಟಡಕ್ಕೆ ಸ್ಥಳದಾನ ಮಾಡಿ, ನಿರ್ಮಾಣಕ್ಕೆ ಸಹಕರಿಸಿದ ಶಕ್ತಿಪ್ರಸಾದ್ ಶೆಟ್ಟಿ ದಂಪತಿಯನ್ನು ಸನ್ಮಾನಿಸಲಾಯಿತು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ. ತುಂಗಪ್ಪ ಬಂಗೇರ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಪ್ರಭಾಕರ ಪ್ರಭು, ಕುಕ್ಕಿಪಾಡಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಶ್ಮಿತ್ ಶೆಟ್ಟಿ, ಸ್ಥಳದಾನಿ ಹಾಗೂ ಕಟ್ಟಡ ನಿರ್ಮಾತೃ ಶಕ್ತಿಪ್ರಸಾದ್ ಶೆಟ್ಟಿ, ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಶೇಷಗಿರಿ ನಾಯ್ಕ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮುಮ್ತಾಜ್, ಕುಕ್ಕಿಪಾಡಿ ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಶೇಖರ್ ಶೆಟ್ಟಿ, ನಿಕಟಪೂರ್ವ ಉಪಾಧ್ಯಕ್ಷೆ ಬೇಬಿ ಹಾಗೂ ಅಂಗನವಾಡಿ ಸಹಾಯಕಿ ಬೇಬಿ ಉಪಸ್ಥಿತರಿದ್ದರು. ಮೇಲ್ವಿಚಾರಕಿ ನೀತಾ ಕುಮಾರಿ ಡಿ. ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ಬೇಬಿ ವಂದಿಸಿದರು. ಪ್ರಜ್ವಲ್ ಸಿದ್ದಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.