ಮಂಗಳೂರು: ಅನುದಾನದ ಕೊರತೆಯ ನಡುವೆಯೂ ಕ್ಷೇತ್ರದ ಅಭಿವೃದ್ಧಿಗೆ ನಿರಂತರ ಆದ್ಯತೆ ನೀಡಲಾಗುತ್ತಿದ್ದು, ಜನರ ನಿರೀಕ್ಷೆಗಳಿಗೆ ಅಭಿವೃದ್ಧಿ ಕಾರ್ಯಗಳ ಮೂಲಕವೇ ಉತ್ತರ ನೀಡಿದ್ದೇನೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಪ್ರಮುಖ ಗುರಿಯಾಗಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಹೇಳಿದರು.
ಅರ್ಕುಳ ಗ್ರಾಮದ ತುಪ್ಪೆಕಲ್ಲಿನಲ್ಲಿ ಸುಮಾರು 75 ಲಕ್ಷ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಸದಾನಂದ ಆಳ್ವ ಕಂಪ, ಬಿಜೆಪಿ ಅಡ್ಯಾರ್ ಮಹಾಶಕ್ತಿಕೇಂದ್ರದ ಕಾರ್ಯದರ್ಶಿ ಅಜಿತ್ ಶೆಟ್ಟಿ ಅಡ್ಯಾರ್ ಗುತ್ತು, ಅಡ್ಯಾರ್–ಅರ್ಕುಳ ಶಕ್ತಿಕೇಂದ್ರದ ಪ್ರಭಾರಿ ಆಶ್ರಿತ್ ನೋಂಡ, ಅರ್ಕುಳ ಶಕ್ತಿಕೇಂದ್ರದ ಅಧ್ಯಕ್ಷ ಪುಣೀತ್ ಸೇಮಿತ, ತುಪ್ಪೆಕಲ್ಲು ಬೂತ್ ಅಧ್ಯಕ್ಷ ಜಯಂತ್ ಬಂಗೇರ ಸೇರಿದಂತೆ ಪಕ್ಷದ ವಿವಿಧ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.ನವೀನ್ ಶೆಟ್ಟಿ ತುಪ್ಪೆಕಲ್ಲು ಸ್ವಾಗತಿಸಿ, ಪ್ರವೀಣ್ ಕುಮಾರ್ ಅರ್ಕುಳ ವಂದಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಜನರ ನಿರೀಕ್ಷೆಗಳಿಗೆ ಅಭಿವೃದ್ಧಿಯೇ ಉತ್ತರ: ಶಾಸಕ ಡಾ. ವೈ. ಭರತ್ ಶೆಟ್ಟಿ"
Be the first to comment on "ಜನರ ನಿರೀಕ್ಷೆಗಳಿಗೆ ಅಭಿವೃದ್ಧಿಯೇ ಉತ್ತರ: ಶಾಸಕ ಡಾ. ವೈ. ಭರತ್ ಶೆಟ್ಟಿ"