ಮಂಗಳೂರು: ಅನುದಾನದ ಕೊರತೆಯ ನಡುವೆಯೂ ಕ್ಷೇತ್ರದ ಅಭಿವೃದ್ಧಿಗೆ ನಿರಂತರ ಆದ್ಯತೆ ನೀಡಲಾಗುತ್ತಿದ್ದು, ಜನರ ನಿರೀಕ್ಷೆಗಳಿಗೆ ಅಭಿವೃದ್ಧಿ ಕಾರ್ಯಗಳ ಮೂಲಕವೇ ಉತ್ತರ ನೀಡಿದ್ದೇನೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಪ್ರಮುಖ ಗುರಿಯಾಗಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಹೇಳಿದರು.
ಅರ್ಕುಳ ಗ್ರಾಮದ ತುಪ್ಪೆಕಲ್ಲಿನಲ್ಲಿ ಸುಮಾರು 75 ಲಕ್ಷ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಸದಾನಂದ ಆಳ್ವ ಕಂಪ, ಬಿಜೆಪಿ ಅಡ್ಯಾರ್ ಮಹಾಶಕ್ತಿಕೇಂದ್ರದ ಕಾರ್ಯದರ್ಶಿ ಅಜಿತ್ ಶೆಟ್ಟಿ ಅಡ್ಯಾರ್ ಗುತ್ತು, ಅಡ್ಯಾರ್–ಅರ್ಕುಳ ಶಕ್ತಿಕೇಂದ್ರದ ಪ್ರಭಾರಿ ಆಶ್ರಿತ್ ನೋಂಡ, ಅರ್ಕುಳ ಶಕ್ತಿಕೇಂದ್ರದ ಅಧ್ಯಕ್ಷ ಪುಣೀತ್ ಸೇಮಿತ, ತುಪ್ಪೆಕಲ್ಲು ಬೂತ್ ಅಧ್ಯಕ್ಷ ಜಯಂತ್ ಬಂಗೇರ ಸೇರಿದಂತೆ ಪಕ್ಷದ ವಿವಿಧ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.ನವೀನ್ ಶೆಟ್ಟಿ ತುಪ್ಪೆಕಲ್ಲು ಸ್ವಾಗತಿಸಿ, ಪ್ರವೀಣ್ ಕುಮಾರ್ ಅರ್ಕುಳ ವಂದಿಸಿದರು.
BANTWALNEWS (more…)