ವಿಎಒಗೆ ಬೆದರಿಕೆ, ನಿಂದನೆ ಸರಕಾರಿ ಕರ್ತವ್ಯಕ್ಕೆ ಅಡ್ಡಿ: ಸರಕಾರಿ ನೌಕರರ ಸಂಘದಿಂದ ಖಂಡನೆ, ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ನಿಂದಿಸಿ, ಹಲ್ಲೆಗೆ ಯತ್ನಿಸಿ ಜೀವ ಬೆದರಿಕೆಯೊಡ್ಡಿದ್ದಾಗಿ ಆರೋಪಿಸಿ ನೀಡಿದ ದೂರಿನಂತೆ ಪ್ರಕರಣ ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲುಗೊಂಡಿದೆ. ತಹಶೀಲ್ದಾರ್ ಬಂಟ್ವಾಳ ಅನುಮತಿಯೊಂದಿಗೆ ಗ್ರಾಮ ಆಡಳಿತ ಅಧಿಕಾರಿ ಅನಿಲ್ ಕುಮಾರ್ ಹಾಗೂ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘ (ರಿ) ತಾಲೂಕು ಘಟಕ‌ ಬಂಟ್ವಾಳ ರವರಿಂದ ದೂರು ನೀಡಲಾಗಿದೆ.

ಕನ್ಯಾನ ಗ್ರಾಮ ಆಡಳಿತ ಕಚೇರಿಗೆ ಏಕಾಏಕಿಯಾಗಿ ಬಂದು, ಅವಾಚ್ಯ ಪದಗಳಿಂದ ನಿಂದಿಸಿ, ಸರಕಾರಿ ಕರ್ತವ್ಯಕ್ಕೆ ಅಡ್ಡಿ ಮಾಡಿ, ಜೀವ ಬೆದರಿಕೆ ಒಡ್ಡಿದ್ದಾಗಿ ಮಹಮ್ಮದ್ ಇಸ್ಮಾಯಿಲ್ ಆದ್ಲಕುಂಞ ವಿರುದ್ಧ ಆರೋಪಿಸಲಾಗಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮ ಆಡಳಿತಾಧಿಕಾರಿ ಅನಿಲ್ ಕುಮಾರ್ ದೂರು ನೀಡಿದ್ದಾರೆ.

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ತಾಲೂಕು ಘಟಕ ಮತ್ತು ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘ ಬಂಟ್ವಾಳ ತಾಲೂಕು ಘಟಕ ಹಾಗೂ ಬಂಟ್ವಾಳ ತಾಲೂಕು ಗ್ರಾಮ ಸಹಾಯಕರ ಸಂಘದಿಂದ ಘಟನೆಯ ಬಗ್ಗೆ ತೀವ್ರವಾಗಿ ಖಂಡನೆ ವ್ಯಕ್ತಪಡಿಸಿದ್ದಾರೆ.

ಜಾಹೀರಾತು
VNR GOLD

ಠಾಣೆಗೆ ದೂರು ನೀಡುವ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ತಾಲೂಕು ಘಟಕ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ, ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಗೌರವಾಧ್ಯಕ್ಷರಾದ ಯಂ.ಪ್ರವೀಣ್ ಕುಮಾರ್, ಉಪಾಧ್ಯಕ್ಷ ಕರಿಬಸಪ್ಪ ನಾಯಕ್, ಉಳ್ಳಾಲ ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷರಾದ ಶ್ರೀ ತೌಫಿಕ್ ಮತ್ತು ತಾಲೂಕು ಸಂಘದ ಪದಾಧಿಕಾರಿಗಳು, ಹಾಗೂ ಬಂಟ್ವಾಳ ತಾಲೂಕು ಗ್ರಾಮ ಸಹಾಯಕರ ಸಂಘದ ಅಧ್ಯಕ್ಷರಾದ ಯತೀಶ್ ಹಡೀಲು, ಜಿಲ್ಲಾ ಉಪಾಧ್ಯಕ್ಷ ರಾಘವ ಗೌಡ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು

Be the first to comment on "ವಿಎಒಗೆ ಬೆದರಿಕೆ, ನಿಂದನೆ ಸರಕಾರಿ ಕರ್ತವ್ಯಕ್ಕೆ ಅಡ್ಡಿ: ಸರಕಾರಿ ನೌಕರರ ಸಂಘದಿಂದ ಖಂಡನೆ, ಪೊಲೀಸ್ ಠಾಣೆಯಲ್ಲಿ ದೂರು ದಾಖಲು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*