ವಿಟ್ಲ: ಅಂಗನವಾಡಿ ಕಂ-ಕ್ರಷ್ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬಂಟ್ವಾಳ ತಾಲೂಕಿನ ವಿಟ್ಲ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ ವಿವಿಧ ಅಂಗನವಾಡಿ ಕಂ-ಕ್ರಷ್ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ವಿಟ್ಲ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹುದ್ದೆಗಳ ವಿವರ:
ಕಂ-ಕ್ರಷ್ ಕಾರ್ಯಕರ್ತೆ ಹುದ್ದೆಗಳು: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ವಾರ್ಡ್-4ರ ವಿಟ್ಲ ಮಹಿಳಾ ಮಂಡಲ, ವಾರ್ಡ್-3ರ ಉಕ್ಕುಡ, ವೀರಕಂಭ ಗ್ರಾಮದ ಮಂಗಿಲಪದವು ಮತ್ತು ಅಳಿಕೆ ಗ್ರಾಮದ ಭೀಮಾರ ಅಂಗನವಾಡಿ ಕೇಂದ್ರಗಳು.
ಕಂ-ಕ್ರಷ್ ಸಹಾಯಕಿ ಹುದ್ದೆಗಳು: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ವಾರ್ಡ್-4ರ ವಿಟ್ಲ ಮಹಿಳಾಮಂಡಲ, ವಾರ್ಡ್-3ರ ಉಕ್ಕುಡ, ವಾರ್ಡ್-2ರ ಚಂದಳಿಕೆ, ಕೊಳ್ನಾಡು ಗ್ರಾಮದ ಸೇರ್ಕಳ, ಅಳಿಕೆ ಗ್ರಾಮದ ಭೀಮಾರ, ಕೆದಿಲ ಗ್ರಾಮದ ಗಡಿಯಾರ ಹಾಗೂ ವೀರಕಂಭ ಗ್ರಾಮದ ಮಂಗಿಲಪದವು ಅಂಗನವಾಡಿ ಕೇಂದ್ರಗಳು.
ವಿದ್ಯಾರ್ಹತೆ ಮತ್ತು ವಯೋಮಿತಿ:
ಜಾಹೀರಾತು
ಕಾರ್ಯಕರ್ತೆ ಹುದ್ದೆ: ದ್ವಿತೀಯ ಪಿ.ಯು.ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಒಂದು ವೇಳೆ ಈ ವಿದ್ಯಾರ್ಹತೆಯ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ 10ನೇ ತರಗತಿ (ಎಸ್ಎಸ್ಎಲ್ಸಿ) ಉತ್ತೀರ್ಣರಾದವರನ್ನು ಪರಿಗಣಿಸಲಾಗುವುದು.
ಸಹಾಯಕಿ ಹುದ್ದೆ: 10ನೇ ತರಗತಿ ಉತ್ತೀರ್ಣರಾಗಿರಬೇಕು. ಈ ವಿದ್ಯಾರ್ಹತೆಯ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ 7ನೇ ತರಗತಿ ಉತ್ತೀರ್ಣರಾದವರನ್ನು ಪರಿಗಣಿಸಲಾಗುವುದು. (ಸೂಚನೆ: ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸಲಾಗುವುದಿಲ್ಲ).
ವಯೋಮಿತಿ ಹಾಗೂ ನಿವಾಸಿ ನಿಯಮ: ಆಯಾ ಅಂಗನವಾಡಿ ಸರ್ವೇ ವ್ಯಾಪ್ತಿಯಲ್ಲಿ ವಾಸವಿರುವ 18 ರಿಂದ 35 ವರ್ಷದೊಳಗಿನ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಮಾಸಿಕ ಗೌರವಧನ:
ಕಾರ್ಯಕರ್ತೆಯರಿಗೆ ರೂ. 5,500/-
ಸಹಾಯಕಿಯರಿಗೆ ರೂ. 3,000/-
ಪ್ರಮುಖ ದಿನಾಂಕಗಳು ಮತ್ತು ಸಂಪರ್ಕ ಮಾಹಿತಿ: ಆಸಕ್ತ ಅಭ್ಯರ್ಥಿಗಳು ಸೂಕ್ತ ದಾಖಲೆಗಳೊಂದಿಗೆ ನವೆಂಬರ್ 23, 2026 ರಿಂದ ಡಿಸೆಂಬರ್ 07, 2026 ರೊಳಗಾಗಿ ಅರ್ಜಿ ಸಲ್ಲಿಸತಕ್ಕದ್ದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಚೇರಿ ಅವಧಿಯಲ್ಲಿ ವಿಟ್ಲ ಶಿಶು ಅಭಿವೃದ್ಧಿ ಯೋಜನಾ ಕಚೇರಿಯನ್ನು (ದೂರವಾಣಿ: 08255-238080) ಸಂಪರ್ಕಿಸುವಂತೆ ಕೋರಲಾಗಿದೆ.
VNR GOLD
ಜಾಹೀರಾತು
Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.