ಬಂಟ್ವಾಳ

ಬಸ್ತಿ ಮಾಧವ ಶೆಣೈ ರೋಟರಿ ಜಿಲ್ಲಾ 3181ರ ಸಹಾಯಕ ಗವರ್ನರ್ ಆಗಿ ಆಯ್ಕೆ

ಪ್ರತಿಷ್ಠಿತ ಬಂಟ್ವಾಳ ರೋಟರಿ ಕ್ಲಬ್ಬಿನ ನಿಕಟಪೂರ್ವ ಅಧ್ಯಕ್ಷರಾದ ಹಿರಿಯ ರೋಟರಿ ಸದಸ್ಯ ಬಸ್ತಿ ಮಾಧವ ಶೆಣೈ ಅವರು ರೋಟರಿ ಜಿಲ್ಲೆ 3181ರ 2027-28ನೇ ಸಾಲಿನ ಸಹಾಯಕ ಗವರ್ನರ್ ಆಗಿ ಆಯ್ಕೆಯಾಗಿದ್ದಾರೆ.

2027-28ನೇ ಸಾಲಿನ ನಿಯೋಜಿತ ಜಿಲ್ಲಾ ಗವರ್ನರ್ ಯಶಸ್ವಿ ಸೋಮಶೇಖರ್ ಅವರು ಶೆಣೈ ಅವರನ್ನು ಈ ಮಹತ್ವದ ಜವಾಬ್ದಾರಿಗೆ ಆಯ್ಕೆ ಮಾಡಿದ್ದಾರೆ. ರೋಟರಿ ಸಂಸ್ಥೆಯಲ್ಲಿ ದೀರ್ಘಕಾಲದಿಂದ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಶೆಣೈ ಅವರು ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದು, ರೋಟರಿ ಪ್ರತಿಷ್ಠಾನದ ಮೇಜರ್ ಡೋನರ್ ಕೂಡ ಆಗಿದ್ದಾರೆ. ರೋಟರಿ ಸೇವೆಯ ಜೊತೆಗೆ ವಿವಿಧ ಸಮಾಜಮುಖಿ ಹಾಗೂ ಜನಪರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜಸೇವೆಯಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.

VNR GOLD
ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.