ಜಿಲ್ಲಾ ಸುದ್ದಿ



ಆಧಾರ್ ತಿದ್ದುಪಡಿ: ಅಂಚೆ ಕಚೇರಿಗಳಲ್ಲೂ ಅವಕಾಶ

ಆಧಾರ್ ಕಾರ್ಡ್‍ಗಳಲ್ಲಿರುವ ದೋಷಗಳನ್ನು ಸರಿಪಡಿಸಲು ಅಂಚೆ ಕಚೇರಿಗಳಲ್ಲೂ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ತಿಳಿಸಿದ್ದಾರೆ.  ಅವರು ಈ ಸಂಬಂಧ ತಮ್ಮ ಕಚೇರಿಯಲ್ಲಿ ಅಂಚೆ ಹಾಗೂ ಬಿಎಸ್‍ಎನ್‍ಎಲ್ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.